ಮಡಿಕೇರಿ ಮೇ 30 : 2023-24 ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ, ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್‍ಲೈನ್ (ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ) ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರದ ಕಾರ್ಯದರ್ಶಿ ತುಲಸಿ ಮದ್ದಿನೇನಿ ತಿಳಿಸಿದ್ದಾರೆ.
ಈ ಇಲಾಖೆಗಳ ವಿದ್ಯಾರ್ಥಿನಿಲಯಗಳಲ್ಲಿ 5ನೇ ತರಗತಿಯಿಂದ 10ನೇ ತರಗತಿಯವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ ಎಸ್‍ಎಟಿಎಸ್ಐ (SATS ID) ಡಿಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ: https://shp.karnataka.gov.in/ಇಲ್ಲಿ ಸಂದರ್ಶಿಸಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಜೂ.15 ಕೊನೆಯ ದಿನ ಆಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.
ವಿಶೇಷ ಸೂಚನೆ: ವಿದ್ಯಾರ್ಥಿಗಳು 2023-24ನೇ ಸಾಲಿನಲ್ಲಿ ಬೇರೆ ಶಾಲೆಗಳಿಗೆ ಪ್ರವೇಶ ಪಡೆದಿದ್ದರೆ ಸದರಿ ವಿದ್ಯಾರ್ಥಿಗಳ ಎಸ್‍ಎಟಿಎಸ್ ಐಡಿ (SATS ID) ಯನ್ನು ಪ್ರಸಕ್ತ ಶಾಲೆಯಲ್ಲಿ, ಸಂಬಂಧಿಸಿದ ಮಾಹಿತಿಯನ್ನು ಇಂಧಿಕರಿಸಿ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*