ಮಡಿಕೇರಿ ಮೇ 30 : ರಾಜ್ಯದಲ್ಲಿ ಸಧ್ಯದಲ್ಲಿಯೇ ಜಿ.ಪಂ ಮತ್ತು ತಾ.ಪಂ ಚುನಾವಣೆ ನಡೆಯಲಿದ್ದು, ಆಮ್ ಆದ್ಮಿ ಪಕ್ಷ ಕೊಡಗು ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ನಿರ್ಧರಿಸಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗಿನಲ್ಲಿ ಕ್ಷೇತ್ರ ಮಟ್ಟದಲ್ಲಿ ಚುನಾವಣೆಗೆ ತಯಾರಿ ಆರಂಭಿಸಿದ್ದು, ಸ್ಪರ್ಧಿಸಲು ಆಸಕ್ತಿ ಹೊಂದಿರುವ ಕಾರ್ಯಕರ್ತರ ಹೆಸರುಗಳನ್ನು ಪಟ್ಟಿ ಮಾಡಲಾಗಿದೆ. ಖಾಲಿ ಇರುವ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ನಡೆದಿದೆ ಎಂದು ಹೇಳಿದ್ದಾರೆ.
ಜಿ.ಪಂ ಮತ್ತು ತಾ.ಪಂ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮೂಲಕ ಸ್ಪರ್ಧಿಸಲು ಆಸಕ್ತಿ ಹೊಂದಿರುವವರು ಭರ್ತಿ ಮಾಡಿದ ಅರ್ಜಿಯೊಂದಿಗೆ ಜೂ.15 ರೊಳಗೆ ಪಕ್ಷದ ಪ್ರಮುಖರಾದ ಹೆಚ್.ಬಿ.ಪೃಥ್ವಿ-98800 73440, ಎಂ.ಕೆ.ಅಪ್ಪಯ್ಯ-98806 54179, ಭೋಜಣ್ಣ ಸೋಮಯ್ಯ-7483991359, ಸಿ.ಎಸ್.ರವೀಂದ್ರ – 93422 57506, ಕೆ.ಪಿ.ಬೋಪಣ್ಣ -78992 73938 ಅವರನ್ನು ಸಂಪರ್ಕಿಸಬಹುದು. ಅರ್ಹ ಅಭ್ಯರ್ಥಿಗಳ ಅರ್ಜಿಯನ್ನು ಜಿಲ್ಲೆ ಮತ್ತು ರಾಜ್ಯ ನಾಯಕರುಗಳ ಸಮ್ಮುಖದಲ್ಲಿ ಪರಿಶೀಲಿಸಲಾಗುವುದು ಎಂದು ಭೋಜಣ್ಣ ಸೋಮಯ್ಯ ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*