ಮಡಿಕೇರಿ ಮೇ 30 : ಕೊಡಗು ಜಿಲ್ಲಾ ಅನುದಾನ ರಹಿತ ಶಾಲೆಯ ವತಿಯಿಂದ ನೂತನವಾಗಿ ಆಯ್ಕೆಯಾದ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಅಭಿನಂದಿಸಲಾಯಿತು.
ಶಾಲೆಯ ಪ್ರಧಾನ ಕಾರ್ಯದರ್ಶಿ ತಿಮ್ಮಯ್ಯ ಕೋಟ್ರಂಗಡ ಹಾಗೂ ಎಂ.ಎಸ್. ಪೂವಯ್ಯ ಹೂವು ನೀಡಿ ಶುಭಕೋರಿದರು.
ಈ ಸಂದರ್ಭ ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೆಳಗಿ ಹಾಗೂ ಇಸಿ ಓ ಅಯ್ಯಪ್ಪ ಉಪಸ್ಥಿತರಿದ್ದರು.








