ಮಡಿಕೇರಿ ಮೇ 31 : ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಶಿಕ್ಷಣ ಪಡೆಯುವುದರ ಜೊತೆಗೆ ತಂಬಾಕು ಮುಕ್ತ ವಾತಾವರಣವನ್ನಾಗಿಸಲು ಶ್ರಮಿಸಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಸಾದ್ ಹೇಳಿದರು.
ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ “ನಮಗೆ ಆಹಾರ ಬೇಕು, ತಂಬಾಕು ಅಲ್ಲ” ಎಂಬ ಧ್ಯೇಯ ವಾಕ್ಯದೊಂದಿಗೆ ನಗರದ ಸರ್ಕಾರಿ ಪ್ರೌಢ ಶಾಲಾ ಸಭಾಂಗಣದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ನಡೆಯಿತು.
ಆರೋಗ್ಯ, ಶಿಕ್ಷಣ, ಸಂಸ್ಕøತಿ ಈ ಎಲ್ಲವೂ ಪ್ರಾರಂಭವಾಗುವುದು ಶಾಲಾ ದಿನಗಳಲ್ಲಿ. ವಿದ್ಯಾರ್ಥಿಗಳ ಜೀವನ ಪ್ರಾರಂಭವಾಗುವುದೇ ಶಾಲಾ ದಿನಗಳಲ್ಲಿ, ಆದ್ದರಿಂದ ಯಾವುದೇ ರೀತಿಯ ದುಶ್ಚಟಗಳಿಗೆ ಬಲಿಯಾಗದೆ ತಮ್ಮನ್ನು ತಾವು ರಕ್ಷಿಸಿಕೊಂಡು ಕುಟುಂಬವನ್ನು ರಕ್ಷಿಸುವುದರ ಜೊತೆಗೆ ಸಮಾಜವನ್ನು ರಕ್ಷಿಸಬೇಕು ಎಂದು ಪ್ರಸಾದ್ ಹೇಳಿದರು.
ಇಂತಹ ದುಶ್ಚಟಗಳನ್ನು ಸಮಾಜದಿಂದ ಹೋಗಲಾಡಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಬೇರೆ ಬೇರೆ ಸಂಘ ಸಂಸ್ಥೆಗಳ ಜೊತೆಗೆ ಎಲ್ಲರೂ ಕೈ ಜೋಡಿಸಿದರೆ ಮಾತ್ರ ಸಾಧ್ಯ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯಾದ್ಯಂತ ಕಾನೂನು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಜುರೆಲ್ ಪೆÇಲೀಸ್ ಘಟಕವನ್ನು ಮಾಡಿದ್ದೇವೆ. ಸ್ಪೆಷಲ್ ಟಾಸ್ಕ್ ಫೆÇೀರ್ಸ್ ಮುಖಾಂತರ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಮಾತನಾಡಿ, 8 ರಿಂದ 9 ನೇ ತರಗತಿಯ ವಯಸ್ಸಿನ ಮಕ್ಕಳು ಅತಿ ಹೆಚ್ಚು ತಂಬಾಕು ವ್ಯಸನಕ್ಕೆ ಒಳಗಾಗುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಎಂದರೆ ತಂಬಾಕು ಸೇವನೆ ಮಾಡಿದರೆ ಏನಾಗುತ್ತದೆ ಎಂಬ ಕುತೂಹಲ ಅವರಲ್ಲಿರುತ್ತದೆ. ಈ ಕುತೂಹಲ ಶಿಕ್ಷಣ, ಸಂಸ್ಕೃತಿಯಲ್ಲಿರಬೇಕೇ ಹೊರತು ದುಶ್ಚಟಗಳಿಗಲ್ಲ ಎಂದು ಹೇಳಿದರು.
ತಂಬಾಕು ಸೇವನೆಯಿಂದ ಜನರು 25ನೇ ವಯಸ್ಸಿಗೆ ಮರಣ ಹೊಂದುವಂತದ್ದು, ಕ್ಯಾನ್ಸರ್, ಹೃದಯ ಸಂಬಂಧಿತ ಕಾಯಿಲೆ, ಸ್ಟ್ರೋಕ್ ಅಂತಹ ಕಾಯಿಲೆಗಳಿಗೆ ತುತ್ತಾಗುವಂತದ್ದು. ಈ ಎಲ್ಲಾ ಕಾಯಿಲೆಗಳಿಗೂ ಮೂಲ ಕಾರಣ ತಂಬಾಕು. ಆದ್ದರಿಂದ ಯುವಕರು ಇದರ ಬಗ್ಗೆ ವಿಶೇಷ ಕಾಳಜಿ ವಹಿಸಿ ತಾವು ಕೂಡ ತಂಬಾಕು ಸೇವನೆ ಮಾಡದೆ ಸಾರ್ವಜನಿಕರಲ್ಲಿ, ಮಕ್ಕಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಂದಿಗೆ ಕೈ ಜೋಡಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಹೇಳಿದರು.
ತಂಬಾಕು ಸೇವನೆ ಅತಿ ಹೆಚ್ಚಾಗಿ ಸಿಗರೇಟ್ ಮುಖಾಂತರ ಆಗುತ್ತಿದೆ. ನಮ್ಮ ಅಕ್ಕಪಕ್ಕದ ಜನರು ತಂಬಾಕು ಸೇವನೆ, ಧೂಮಪಾನ ಮಾಡುವಂತಹ ಸಂದರ್ಭದಲ್ಲಿ ಅವರು ಬಿಡುವಂತಹ ಹೊಗೆಯಿಂದಲು ಸಹ ದುಷ್ಪರಿಣಾಮಗಳು ಉಂಟಾಗುತ್ತಿದೆ. ಪ್ರತಿ ವರ್ಷ ತಂಬಾಕು ಹೊಗೆ ಸೇವನೆಯಿಂದ ಸುಮಾರು 12 ಲಕ್ಷಕ್ಕೂ ಅಧಿಕ ಮಂದಿ ಜನರು ಸಾವನ್ನಪ್ಪುತ್ತಿದ್ದಾರೆ. ಆದ್ದರಿಂದ ನಿರ್ಲಕ್ಷ್ಯ ಮಾಡದೆ, ಪ್ರತಿಯೊಬ್ಬರಲ್ಲೂ ತಂಬಾಕು ಸೇವನೆ ಮತ್ತು ಧೂಮಪಾನ ಮಾಡುವುದರಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್ ಹೇಳಿದರು.
ಜಿಲ್ಲಾ ದಂತ ನೋಡೆಲ್ ಅಧಿಕಾರಿ ಡಾ.ರೇವಣ್ಣ ಅವರು ಮಾತನಾಡಿ ತಂಬಾಕು ಮಾರುಕಟ್ಟೆಯಲ್ಲಿ ಜನರನ್ನು ಆಕರ್ಷಣೆ ಮಾಡುವ ಸಲುವಾಗಿ ಹೊಗೆಯ ರೂಪದಲ್ಲಿ ಹಾಗೂ ಅಗಿದು ತಿನ್ನುವ ರೂಪದಲ್ಲಿ ಜನರನ್ನು ತಲುಪಲು ನೋಡುತ್ತಿವೆ. ಆದ್ದರಿಂದ ಹದಿ ಹರೆಯದ ವಯಸ್ಸಿನ ಯುವಕರು ತಂಬಾಕು ಸೇವನೆ, ಧೂಮಪಾನ ಮತ್ತಿತರ ದುಶ್ಚಟಗಳಿಗೆ ಒಳಗಾಗಬಾರದು ಎಂದು ಹೇಳಿದರು.
ತಂಬಾಕು ಸೇವನೆ ಕಡಿಮೆ ಮಾಡಿದಲ್ಲಿ ಆರ್ಥಿಕವಾಗಿ ಅಲ್ಲದೆ ಮುಖ್ಯವಾಗಿ ಜೀವ ಹಾನಿಯನ್ನು ಸಹ ತಡೆಯಬಹುದು, ವಿದ್ಯಾರ್ಥಿಗಳು ಈ ವ್ಯಸನಗಳಿಗೆ ಬಲಿಯಾಗದೆ, ವಿದ್ಯಾರ್ಥಿ ಜೀವನದಲ್ಲಿ ತಮ್ಮ ಭವಿಷ್ಯದ ದೃಷ್ಟಿಯಿಂದ ಶಿಕ್ಷಣದ ಜೊತೆಗೆ ಕುಟುಂಬದ ಆರ್ಥಿಕ ಸ್ಥಿತಿಯನ್ನು ಗಮನಿಸಿಕೊಂಡು ತಾವು ಸಹ ತಂಬಾಕು ಸೇವನೆಯಿಂದ ದೂರ ಇದ್ದು, ಜನರನ್ನು ಸಹ ತಂಬಾಕು ಸೇವನೆಯಿಂದ ದೂರವಿರಲು ಜಾಗೃತಿ ಮೂಡಿಸುವಂತೆ ಜಿಲ್ಲಾ ದಂತ ನೋಡೆಲ್ ಅಧಿಕಾರಿ ಡಾ. ರೇವಣ್ಣ ಹೇಳಿದರು.
ಇದೇ ಸಂದರ್ಭದಲ್ಲಿ ಸರ್ಕಾರಿ ಪ್ರೌಡಶಾಲೆಗೆ ಹೊಸದಾಗಿ 15 ವಿದ್ಯಾರ್ಥಿಗಳನ್ನು ಹೂ ಗುಚ್ಛ ನೀಡಿ ಶಿಕ್ಷಕರು ಬರಮಾಡಿಕೊಂಡರು. ಅವರಿಗೆ ಪುಸ್ತಕ ಹಾಗೂ ಸಮವಸ್ತ್ರ ವಿತರಿಸಲಾಯಿತು.
ಆರ್‍ಸಿಎಚ್ ಅಧಿಕಾರಿ ಡಾ.ಗೋಫಿನಾಥ್, ನೌಕರರ ಸಂಘದ ಅಧ್ಯಕ್ಷ ಶ್ರೀನಿವಾಸ್, ಎಸ್‍ಡಿಎಂಸಿ ಅಧ್ಯಕ್ಷ ಚಂದ್ರಶೇಖರ್, ತಂಬಾಕು ನಿಯಂತ್ರಣಾಧಿಕಾರಿ ಶ್ರೀನಿವಾಸ್ ಬಿ.ಎಲ್., ಉಪ ಪ್ರಾಂಶುಪಾಲರು ಇತರರು ಇದ್ದರು. ಮೋಕ್ಷ, ಪ್ರತೀಕ, ಶೃತಿಲಾ ಅವರು ಪ್ರಾರ್ಥಿಸಿದರು.
Breaking News
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*