ಮಡಿಕೇರಿ ಮೇ 31 : ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯುವುದರಿಂದ ಪ್ರತಿ ವರ್ಷದ ಜೂ.1 ರಿಂದ ಜು.30 ರವರೆಗೆ ರಾಜ್ಯದ ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು, ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ ಮೀನು ಹಿಡಿಯುವುದನ್ನು ಪೂರ್ಣವಾಗಿ ನಿಷೇಧಿಸಲಾಗಿದೆ.
ಈ ಅವಧಿಯು ಮೀನಿನ ಜೀವನ ಚಕ್ರದಲ್ಲಿ ಅತಿಮುಖ್ಯವಾದ ಘಟ್ಟವಾಗಿದೆ. ಸ್ಥಳೀಯ ತಳಿಗಳು ಮುಂದಿನ ಪೀಳಿಗೆಗೆ ತಮ್ಮ ಸಂತತಿಯನ್ನು ನೀಡುವ ಸಮಯವಾಗಿರುವುದರಿಂದ ಈ ಅವಧಿಯಲ್ಲಿ ಜಿಲ್ಲೆಯ ಸಾರ್ವಜನಿಕರು ಹಾಗೂ ಮೀನುಗಾರರು ಎಲ್ಲಾ ಸರ್ವಋತು ಕೆರೆಗಳು, ಜಲಾಶಯಗಳು ತೊರೆಗಳು, ಅಳಿವೆಗಳು ಮತ್ತು ನದಿಗಳಲ್ಲಿ, ಮೀನುಗಳನ್ನು ಈ ಎರಡು ತಿಂಗಳು ಹಿಡಿಯದೇ ಅವುಗಳ ಸಂತಾನ ಅಭಿವೃದ್ದಿಗೆ ಪೂರಕ ವಾತಾವರಣ ಕಲ್ಪಿಸಿಕೊಟ್ಟು ಮೀನಿನ ಸ್ಥಳೀಯ ತಳಿಗಳ ಸಂರಕ್ಷಣಿಯಲ್ಲಿ ಇಲಾಖೆಯೊಂದಿಗೆ ಸಹಕರಿಸುವಂತೆ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
Breaking News
- *ನ.26ರಂದು ಸಿಎನ್ಸಿಯಿಂದ ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ಶಿಶು ಸಾಹಿತ್ಯದ ಪಿತಾಮಹ ಪಂಜೆ ಮಂಗೇಶರಾಯರು*
- *ಸುಂಟಿಕೊಪ್ಪದಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ ಕಾರ್ಯಕ್ರಮ : ಸಾಧಕರಿಗೆ ಸನ್ಮಾನ*
- *ಹೆಗ್ಗಳ ಶ್ರೀ ಗೋಪಾಲಕೃಷ್ಣ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
- *ಕೂತಿನಾಡು : ದೇವಾಲಯದ ಜೀರ್ಣೋದ್ಧಾರಕ್ಕೆ ಆರೋಡ ತಾಂಬೂಲ ಪ್ರಶ್ನೆ*
- *ಮಡಿಕೇರಿ : ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ*
- ಕುಶಾಲನಗರ ಕನ್ನಡ ಭಾರತಿ ಕಾಲೇಜಿನಲ್ಲಿ ಅಕ್ಷರ ಜ್ಯೋತಿ ಯಾತ್ರೆ ಕುರಿತು ಉಪನ್ಯಾಸ : ವಿದ್ಯಾರ್ಥಿಗಳಲ್ಲಿ ಉತ್ತರ ಪ್ರೇರಣೆ, ಸ್ಫೂರ್ತಿ ಬೆಳೆಸಬೇಕು : ಬಸವಕುಮಾರ್ ಪಾಟೀಲ್*
- *ಶ್ರದ್ಧಾಭಕ್ತಿಯಿಂದ ಜರುಗಿದ ಅರಪಟ್ಟು ಶ್ರೀ ಅಯ್ಯಪ್ಪ ಸ್ವಾಮಿ ವಾರ್ಷಿಕ ಮಹಾಪೂಜೆ*
- *ಜಯ ಹೇ ಕರ್ನಾಟಕ ಮಾತೆ ಗೀತೆಗೆ 100 ವರ್ಷ : ಕೊಡಗಿನಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು*
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*