ಮಡಿಕೇರಿ ಮೇ 31 : ಕೊಡಗು ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು, ಸಾರ್ವಜನಿಕ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಕೇಂದ್ರದಲ್ಲಿ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತ ಬಂದಿದೆ.
ಈ ಯೋಜನೆಯಡಿ ಬಿಪಿಎಲ್ ಕುಟುಂಬ ವರ್ಗದವರಿಗೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ ಹಾಗೂ ಎಪಿಎಲ್ ಕುಟುಂಬ ವರ್ಗದವರಿಗೆ ಪ್ಯಾಕೇಜ್ ದರದ ಶೇ.30 ರಿಯಾಯಿತಿ ಇದೆ. ಈ ಸೇವೆಗಳನ್ನು ಪಡೆದುಕೊಳ್ಳಲು ಆರೋಗ್ಯ ಇಲಾಖೆಯಿಂದ ಹಾಗೂ ಗ್ರಾಮ ಒನ್ ಕೇಂದ್ರಗಳಿಂದ ನೀಡಿರುವ ಆರೋಗ್ಯ ಕಾರ್ಡ್‍ಗಳು. ಬಿಪಿಎಲ್, ಎಪಿಎಲ್, ಆಧಾರ್ ಕಾರ್ಡ್‍ಗಳು ಅವಶ್ಯಕವಾಗಿ ಬೇಕಾಗಿರುತ್ತದೆ. ಹಾಗೂ ಜಿಲ್ಲೆಯ ರೋಗಿಗಳು ಮತ್ತು ಸಾರ್ವಜನಿಕರು ಎಬಿಎಆರ್‍ಕೆ ಯೋಜನೆಯಡಿ ಹೆಚ್ಚಿನ ಚಿಕಿತ್ಸೆಗೆ ಹೊರ ಜಿಲ್ಲೆಗಳಿಗೆ ತೆರಳುವ ಸಂದರ್ಭದಲ್ಲಿ ಕಡ್ಡಾಯವಾಗಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ರೆಫರಲ್ ನಮೂನೆಗಳನ್ನು ಪಡೆದುಕೊಂಡು ತೆರಳಬೇಕು ಎಂದು ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಜಿಲ್ಲೆಯ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತ ಚಿಕಿತ್ಸೆಗಾಗಿ ಸಾರ್ವಜನಿಕರು ಹಾಗೂ ರೋಗಿಗಳು ತಮ್ಮ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‍ಗಳನ್ನು ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ತಿಳಿಸಿದ್ದಾರೆ.
Breaking News
- *ಮಡಿಕೇರಿಯಲ್ಲಿ ಡಾ.ಅಖಿಲ್ ಕುಟ್ಟಪ್ಪ – ಅಶ್ವಥ್ ಅಯ್ಯಪ್ಪ ಸ್ಮರಣಾಥ೯ ಕ್ರಿಕೆಟ್ ಪಂದ್ಯಾವಳಿ : ಸಾಧಕ ಕ್ರೀಡಾಪಟುಗಳಾಗುವತ್ತ ಚಿತ್ತ ಹರಿಸಿ : ನಿವೃತ್ತ ಏರ್ ಮಾಷ೯ಲ್ ಕಾಯ೯ಪ್ಪ ಕರೆ*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡಿ : ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ*
- *ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ಅಭಿವೃದ್ಧಿಗೆ ದೇಣಿಗೆ ನೀಡಿದ ಹರಪಳ್ಳಿ ರವೀಂದ್ರ*
- *ಕೂಡಿಗೆಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ : ಆಟೋ ಚಾಲಕರು ಕನ್ನಡ ನಾಡು-ನುಡಿಯ ರಾಯಭಾರಿಗಳು : ವಿ.ಪಿ.ಶಶಿಧರ್ ಬಣ್ಣನೆ*
- *ಗೋಣಿಕೊಪ್ಪ : ಮನಸ್ಸು ಮತ್ತು ಮನೆಯಿಂದಲೇ ಭ್ರಷ್ಟಾಚಾರ ಪ್ರಾರಂಭ : ಡಾ.ಕೆ.ಬಸವರಾಜು*
- *ಶಾಸಕ ಎ.ಎಸ್.ಪೊನ್ನಣ್ಣ ರಿಗೆ ವಿಧಾನಸಭಾಧ್ಯಕ್ಷರ ಕಚೇರಿಯಿಂದ ಕೊಡುಗೆ*
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*
- *ವೀರ ಸೇನಾನಿಗಳಿಗೆ ಅಗೌರವ : ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆ ಖಂಡನೆ : ಆರೋಪಿಯ ಗಡಿಪಾರಿಗೆ ಆಗ್ರಹ*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ ಫಲಿತಾಂಶ*
- *ನ.29ರಂದು ಕೊಡಗು ಜಿಲ್ಲಾ ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆಯ 12ನೇ ವಾರ್ಷಿಕ ಮಹಾಸಭೆ*