ಮಡಿಕೇರಿ ಜೂ.1 : ಹತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಕಾಲು ಜಾರಿ ಬಿದ್ದು ನದಿ ಪಾಲಾದ ಘಟನೆ ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕೊಂಡಂಗೇರಿಯಲ್ಲಿ ನಡೆದಿದೆ.
ಆಸಿಮ್ (15) ಮೃತ ದುರ್ದೈವಿಯಾಗಿದ್ದು, ನದಿ ದಡದಲ್ಲಿ ಬರುತ್ತಿದ್ದ ಸಂದರ್ಭ ಕಾಲು ಜಾರಿ ಬಿದ್ದಿರುವುದಾಗಿ ಹೇಳಲಾಗಿದೆ. ಸ್ಥಳಕ್ಕೆ ಸಿದ್ದಾಪುರ
ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸತತ ಪ್ರಯತ್ನದ ನಂತರ ಮೃತ ದೇಹ ಪತ್ತೆಯಾಗಿದೆ.









