ಸುಂಟಿಕೊಪ್ಪ ಜೂ.1 : ಹುಲಿ ಚಾಮುಂಡೇಶ್ವರಿ ದೇವಾಲಯದ 8ನೇ ವರ್ಷದ ವಾರ್ಷಿಕೋತ್ಸವವು ಶ್ರದ್ಧಾಭಕ್ತಿಯಿಂದ ಜರುಗಿತು.
ಶ್ರೀಚಾಮುಂಡಿ ಹೋಮ ಹಾಗೂ ಅಭಿಷೇಕ ಪೂಜೆ, ಅಲಂಕಾರ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳ ಬಳಿಕ ಮಹಾಮಂಗಳಾರತಿ ನೆರವೇರಿತು.
ನಂತರ ನೆರೆದಿದ್ದ ಭಕ್ತಾಧಿಗಳಿಗೆ ತೀರ್ಥ ಪ್ರಸಾದ ಹಾಗೂ ಅನ್ನ ಸಂತರ್ಪಣೆನಡೆಯಿತು.
ಈ ಸಂದರ್ಭ ಸುಂಟಿಕೊಪ್ಪ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರುಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ವಾರ್ಷಿಕೋತ್ಸವದ ಅಂಗವಾಗಿ ವಿಶೇಷ ಪೂಜಾ ವಿಧಿವಿಧಾನಗಳನ್ನು ಅಂದಗೋವೆ ಗ್ರಾಮದ ಅರ್ಚಕ ಗಣೇಶ ಭಟ್ ಹಾಗೂ ಮಂಜುನಾಥ್ ಭಟ್ ನೆರವೇರಿಸಿದರು.










