ನಾಪೋಕ್ಲು ಜೂ.1 : ಮೂರ್ನಾಡಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಕಾಲೇಜು ವಾಣಿಜ್ಯ ಫೆಸ್ಟ್ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.
ಈ ಸಂದರ್ಭ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು ನಡೆಯಿತು.
ನಂತರ ನಡೆದ ಸಭಾಕಾರ್ಯಕ್ರಮದಲ್ಲಿ ಫೀಲ್ಡ್ ಮಾರ್ಷಲ್ ಕೆಎಂ ಕಾರ್ಯಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಚೌರಿರ ಡಾ. ಜಗತ್ ತಿಮ್ಮಯ್ಯ ಮಾತನಾಡಿ, ಇಂತಹ ಕಾರ್ಯಕ್ರಮ ಪ್ರತಿ ವಿದ್ಯಾರ್ಥಿಗಳಲ್ಲಿ ಉತ್ಸಾಹವನ್ನು ತುಂಬುತ್ತದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ವಿದ್ಯಾಸಂಸ್ಥೆಯ ಅಧ್ಯಕ್ಷ ಬಾಚಟ್ಟಿರ ಜಿ ಮಾದಪ್ಪ ವಿದ್ಯಾರ್ಥಿಗಳ ಪ್ರತಿಭೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ರೇಖಾ ಚಿಣ್ಣಪ್ಪ ಮಾತನಾಡಿ, ಪ್ರತಿ ವಿದ್ಯಾರ್ಥಿಯಲ್ಲೂ ಪ್ರತಿಭೆ ಇದ್ದೇ ಇರುತ್ತದೆ ಅದನ್ನು ಹೊರ ಸೂಸಲು ಇಂತಹ ವೇದಿಕೆಗಳ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷರುಗಳಾದ ಪುದಿಯೋಕ್ಕಡ ಸುಬ್ರಮಣಿ, ಕಾರ್ಯದರ್ಶಿ ಪೆಮ್ಮಡಿಯಂಡ ವೇಣು ಅಪ್ಪಣ್ಣ, ಖಜಾಂಚಿ ಬಡುವಂಡ ಸುಬ್ರಮಣಿ ಹಾಗೂ ಕಾರ್ಯಕ್ರಮ ಸಂಯೋಜಕ ಉಪನ್ಯಾಸಕ ಸೋಮಯ್ಯ, ಮೂರ್ನಾಡು ವಿದ್ಯಾ ಸಂಸ್ಥೆಯ ಎಲ್ಲಾ ವಿಭಾಗದ ಮುಖ್ಯಸ್ಥರು, ವಿವಿಧ ಸ್ಪರ್ಧೆಗಳ ತೀರ್ಪುಗಾರರು, ವಿಶೇಷ ಆಹ್ವಾನಿತರು, ಉಪನ್ಯಾಸಕ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಆಕರ್ಷಕ ಟ್ರೋಫಿ ವಿತರಿಸಲಾಯಿತು.
ವರದಿ : ದುಗ್ಗಳ ಸದಾನಂದ.