ಮಡಿಕೇರಿ ಜೂ.1 : ಸಣ್ಣ ವಯಸ್ಸಿನಲ್ಲಿಯೇ ಹೆಚ್ಚು ಹೆಚ್ಚು ಜವಾಬ್ದಾರಿಯನ್ನು ನಿಭಾಯಿಸುವುದರಿಂದ ಭವಿಷ್ಯದಲ್ಲಿ ಸಾಧನೆ ಮಾಡಲು ಮುನ್ನುಡಿಯಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದರು.
ನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಹೊಸದಾಗಿ ಆಯ್ಕೆಗೊಂಡ ಗ್ರಾಮ ಲೆಕ್ಕಾಧಿಕಾರಿಗಳಿಗೆ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರಾಕೃತಿಕ ವಿಕೋಪ ಸೇರಿದಂತೆ ವಿವಿಧ ರೀತಿಯ ಸವಾಲುಗಳು ಹಾಗೂ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಎಲ್ಲರೂ ಹೆಚ್ಚು ವಿಚಾರಗಳನ್ನು ತಿಳಿದುಕೊಳ್ಳುವಂತಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಹೇಳಿದ್ದಾರೆ.
ಅಧಿಕಾರಿಗಳು ಯಾವ ರೀತಿಯಾಗಿ ಯಾವ ಸೆಕ್ಷನ್ ಅಡಿಯಲ್ಲಿ ಯಾರು ಜಾಗ ಮಂಜೂರು ಮಾಡಿದ್ದಾರೆ ಹಾಗೂ ಯಾವ ಸೆಕ್ಷನ್ ಅಡಿಯಲ್ಲಿ ಮಂಜೂರು ಮಾಡಬಹುದು ಎಂದು ತಿಳಿಸಲಾಗುವುದು ಹಾಗೂ ಕೆಲವೊಂದು ವಿಚಾರಗಳ ಬಗ್ಗೆ ತಿಳಿಯಲು ಖುದ್ದಾಗಿ ಸ್ಥಳ ಪರಿಶೀಲನೆ ಮಾಡಿ ಹೇಳಿಕೊಡಲಾಗುವುದು ಎಂದು ತಿಳಿಸಿದರು.
ಸೆಕ್ಷನ್‍ಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ತಿಳಿದುಕೊಳ್ಳಲು ಪುಸ್ತಕ ಅಧ್ಯಯನ ಮಾಡಬೇಕು. ದಿನ ನಿತ್ಯ 2 ರಿಂದ 3 ಗಂಟೆ ಇದಕ್ಕೆ ಸಮಯ ಮೀಸಲಿಡಬೇಕು, ಹಾಗೂ ವಾಟ್ಸಪ್ ಗ್ರೂಪ್ ರಚಿಸಿಕೊಂಡು ಸಂದೇಶ ಹಾಗೂ ಯಾವುದಾದರು ವಿಷಯಗಳ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲದೆ ಇದ್ದರೆ ಪರಸ್ಪರ ಸಮಾಲೋಚನೆ ನಡೆಸಿ ಬಗೆಹರಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಮಾತನಾಡಿ ನಿರಂತರವಾಗಿ ಓದುವ ಮೂಲಕ ಜ್ಞಾನ ವೃದ್ಧಿಸಿಕೊಳ್ಳಬೇಕು, ಗ್ರಾಮಾಡಳಿತ ಗ್ರಾಮ ಲೆಕ್ಕಾಧಿಕಾರಿಯ ಜವಾಬ್ದಾರಿ, ಕರ್ತವ್ಯಗಳ ಬಗ್ಗೆ ತರಬೇತಿಯಲ್ಲಿ ತಿಳಿಸಲಾಗುವುದು ಹಾಗೂ ಆಹಾರ, ಚುನಾವಣೆ, ಭೂ ಅಭಿವೃದ್ಧಿ, ಸಾರ್ವಜನಿಕ ಸ್ಥಳಗಳಿಗೆ ಭೂಮಿ ಹಂಚಿಕೆ ಇನ್ನೂ ಹಲವಾರು ವಿಷಯಗಳ ಬಗ್ಗೆ ಮಾಹಿತಿ ನೀಡಲಾಗುವುದು. ಆದ್ದರಿಂದ ಹೆಚ್ಚಿನ ಗಮನ ಕೇಂದ್ರೀಕರಿಸಿ ಮಾಹಿತಿ ತಿಳಿದುಕೊಳ್ಳುವಂತೆ ಹೇಳಿದರು.
ನಿವೃತ್ತ ತಹಶೀಲ್ದಾರ ಬಿ.ಎಸ್.ಹಿರಿಯಣ್ಣ ಮಾತನಾಡಿ, ಅಭ್ಯರ್ಥಿಗಳಿಗೆ ವಾರದಲ್ಲಿ ಒಂದು ಬಾರಿಯಾದರೂ ತಾಲೂಕು ಕಚೇರಿಗಳಲ್ಲಿ ಪ್ರಾಯೋಗಿಕವಾಗಿ ತರಬೇತಿ ನೀಡಲು ಅನುವು ಮಾಡಿ ಕೊಡುವಂತೆ ಕೋರಿದರು. ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಶಿವರಾಮಯ್ಯ ಮಾತನಾಡಿದರು.
Breaking News
- *ಲಾರಿ ಡಿಕ್ಕಿಯಾಗಿ ಬಾಲಕಿ ಸಾವು*
- *ಅದವಿಯಾಗೆ ಅಭಿನಂದನೆ*
- *ನಿಧನ ಸುದ್ದಿ*
- *ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ*
- *ಕಾರಾಗೃಹ ವಾರ್ಡನ್ ಹುದ್ದೆಗೆ ಆಹ್ವಾನ*
- *ವೀರ ಸೇನಾನಿಗಳಿಗೆ ಅಗೌರವ : ಕುಲಾಲ ಕುಂಬಾರ ಸಂಘ ಖಂಡನೆ*
- *ಡಿ.1 ರಂದು ಜಿಲ್ಲಾ ಮಟ್ಟದ ಕ್ರಿಸ್ಮಸ್ ಕರೋಲ್ ಗಾಯನ ಸ್ಪರ್ಧೆ*
- *ಆರೋಪಿಯ ಗಡಿಪಾರಿಗೆ ಹಿಂದು ಜಾಗರಣ ವೇದಿಕೆ ಒತ್ತಾಯ*
- *ಸೋಮವಾರಪೇಟೆ ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿವಿಧ ಸ್ಪರ್ಧಾ ಕಾರ್ಯಕ್ರಮ*
- *ಸೋಮವಾರಪೇಟೆ : ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ : ಹಿರಿಯ ಸಿವಿಲ್ ನ್ಯಾಯಾಧೀಶ ಗೋಪಾಲಕೃಷ್ಣ*