ಮಡಿಕೇರಿ ಜೂ.1 : ವಿರಾಜಪೇಟೆಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೊಸ ಶಿಕ್ಷಣ ನೀತಿ ಆಧಾರಿತ ಮೂರು ವರ್ಷದ ಪದವಿ ತರಗತಿಗೆ ಪ್ರವೇಶಾತಿ ಆರಂಭವಾಗಿದೆ. ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಯಾವುದೇ ಬೋಧನ ಶುಲ್ಕ ಇರುವುದಿಲ್ಲ.
ಬಿಎ ಪದವಿ (ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಐಚ್ಛಿಕ ಕನ್ನಡ), ಬಿಕಾಂ ಪದವಿ, ಬಿಬಿಎ ಪದವಿ. ಆಸಕ್ತ ವಿದ್ಯಾರ್ಥಿಗಳು ಕಾಲೇಜು ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಾಂಶುಪಾಲ ಡಾ. ಕೆ.ಸಿ.ದಯಾನಂದ ತಿಳಿಸಿದ್ದಾರೆ.







