ಮಡಿಕೇರಿ ಜೂ.1 : ಕೊಡಗು ವಿಶ್ವವಿದ್ಯಾನಿಲಯ, ಮಂಗಳೂರು ವಿಶ್ವವಿದ್ಯಾನಿಲಯ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ವತಿಯಿಂದ ಆರ್ಟ್ಸ್ ಫೆಸ್ಟ್ ಕಲಾವೈಭವದ ಉದ್ಘಾಟನಾ ಕಾರ್ಯಕ್ರಮವು ಜೂ.3 ರಂದು ಬೆಳಗ್ಗೆ 9.30 ಗಂಟೆಗೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ, ಕೊಡಗು ವಿಶ್ವವಿದ್ಯಾನಿಲಯದ ಉಪ ಕುಲಪತಿ ಪ್ರೊ.ಅಶೋಕ್ ಸಂಗಪ್ಪ ಆಲೂರು, ಎಫ್‍ಎಂಕೆಎಂಸಿ ಕಾಲೇಜಿನ ಪ್ರಾಂಶುಪಾಲ ಮೆ.ಡಾ.ಬಿ.ರಾಘವ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.
ನಂತರ ಮಧ್ಯಾಹ್ನ 3.30 ಗಂಟೆಗೆ ವ್ಯಾಲಿಡೆಕ್ಟರಿ(ಮೌಲ್ಯಾಧಾರಿತ) ಕಾರ್ಯಕ್ರಮ ನಡೆಯಲಿದೆ. ಕನ್ನಡ ಚಲನಚಿತ್ರ ನಟರಾದ ಎಂ.ಆದ್ಯ ತಿಮ್ಮಯ್ಯ, ಜಿ.ಪಂ ಮಾಜಿ ಸದಸ್ಯ ಪಿ.ಎಂ.ಅಬ್ದುಲ್ ಲತೀಫ್ ಹಾಗೂ ಇತರರು ಪಾಲ್ಗೊಳ್ಳಲಿದ್ದಾರೆ.









