ಮಡಿಕೇರಿ ಜೂ.1 : ಪೊನ್ನಂಪೇಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮಹಿಳಾ)ಗೆ 2023-24 ನೇ ಶೈಕ್ಷಣಿಕ ವರ್ಷದಲ್ಲಿ ಎಸ್‍ಎಸ್‍ಎಲ್‍ಸಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಎಲೆಕ್ಟ್ರಾನಿಕ್ ಮೆಕ್ಯಾನಿಕ್(2 ವರ್ಷ) (ಎನ್‍ಸಿವಿಟಿ) ಮತ್ತು ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್ (1 ವರ್ಷ) (ಎನ್‍ಸಿವಿಟಿ) ವೃತ್ತಿಗಳಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರವೇಶಕ್ಕೆ ಜೂ.9 ರವರೆಗೆ ಹತ್ತಿರದ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿಯೇ ಖುದ್ದಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಪ್ರಾಚಾರ್ಯರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಮಹಿಳಾ) ಪೊನ್ನಂಪೇಟೆ ಇವರನ್ನು ಕೆಲಸದ ವೇಳೆಯಲ್ಲಿ ಅಥವಾ ದೂ.ಸಂ.08274-200221 ಮತ್ತು 9036796935, 8971358220 ನ್ನು ಸಂಪರ್ಕಿಸಬಹುದು ಎಂದು ಪೊನ್ನಂಪೇಟೆ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.









