ಮಡಿಕೇರಿ ಜೂ.2 : ಕೊಡಗಿನ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾಗಿ ನೇಮಕಗೊಂಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊನ್ನಣ್ಣ ಅವರನ್ನು ಈ ಜವಾಬ್ದಾರಿಗೆ ನೇಮಿಸಿ ಆದೇಶ ಹೊರಡಿಸಲು ಸರಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.
ಇದು ಸಂಪುಟ ದರ್ಜೆಯ ಸಚಿವರ ಸ್ಥಾನಮಾನವಾಗಿದ್ದು, ಇದೀಗ ಪೊನ್ನಣ್ಣ ಅವರಿಗೆ ಸಂಪುಟ ದರ್ಜೆಯ ಸಚಿವರ ಸ್ಥಾನಮಾನದೊಂದಿಗೆ ಲಭ್ಯವಿರುವ ಎಲ್ಲಾ ಸೌಲಭ್ಯಗಳು ದೊರೆಯಲಿವೆ.
ಈ ಬಾರಿಯ ಸಚಿವರ ಸಂಪುಟದಲ್ಲಿ ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ಸಿಗುವ ಆಶಾಭಾವನೆ ಜಿಲ್ಲೆಯ ಜನರಲ್ಲಿತ್ತು. ಆದರೆ ಇವರು ಸಚಿವ ಸ್ಥಾನದಿಂದ ವಂಚಿತರಾಗಿದ್ದರು.
ಇದೀಗ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಸ್ಥಾನಮಾನ ಸಿಕ್ಕಿರುವುದು ಜಿಲ್ಲೆಗೆ ಪ್ರಾತಿನಿಧ್ಯ ದೊರೆತಂತಾಗಿದೆ.









