ಮಡಿಕೇರಿ ಜೂ.2 : ಪರಿಸರ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಗಿಡ ನೆಟ್ಟು ಪೋಷಿಸಿ ಬೆಳೆಸುವುದರ ಮೂಲಕ ಪರಿಸರ ಉಳಿಸಲು ಕೊಡಗು ಜಿಲ್ಲಾಧಿಕಾರಿ ಡಾ. ಬಿ.ಸಿ.ಸತೀಶ್ ಕರೆ ನೀಡಿದ್ದಾರೆ.
ಕೊಡಗು ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಹಾಗೂ ಸೋಮವಾರಪೇಟೆ ಸಾಮಾಜಿಕ ಅರಣ್ಯ ವಲಯದ ವತಿಯಿಂದ ಕೂಡುಮಂಗಳೂರು ಸರಕಾರಿ ಪ್ರೌಢಶಾಲೆಯ ಜೆ.ಸಿ.ಬೋಸ್ ಇಕೋ ಕ್ಲಬ್ ಮತ್ತು ಎನ್.ಎಸ್.ಎಸ್.ಘಟಕ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತಾಶ್ರಯದ ಸಹಯೋಗದಲ್ಲಿ “ಗೋ ಗ್ರೀನ್” ಅಭಿಯಾನದ ಅಂಗವಾಗಿ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ನಡೆದ ಪರಿಸರ ಜಾಗೃತಿ ಆಂದೋಲನದಲ್ಲಿ ಗಿಡ ನೆಟ್ಟು ಮಾತನಾಡಿದರು.
ವಿದ್ಯಾರ್ಥಿಗಳು ತಮ್ಮನ್ನು ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು. ನಾವು ನಮ್ಮ ಸುತ್ತಲಿನ ಪರಿಸರ ಸೇರಿದಂತೆ ಪ್ರತಿ ಶಾಲಾ ಕಾಲೇಜು, ಆಸ್ಪತ್ರೆ, ಹಾಸ್ಟೆಲ್ ಮತ್ತಿತರ ಸರ್ಕಾರಿ ಜಾಗ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗಿಡ ನೆಟ್ಟು ಬೆಳೆಸುವ ಮೂಲಕ ಪರಿಸರವನ್ನು ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಡಿಡಿಪಿಐ ಸಿ.ರಂಗಧಾಮಯ್ಯ ಮಾತನಾಡಿ, ಪ್ರತಿ ವಿದ್ಯಾರ್ಥಿಯು ಒಂದೊಂದು ಗಿಡ ನೆಟ್ಟು ಪೋಷಿಸಿ ಬೆಳೆಸುವ ಸಂಕಲ್ಪ ತೊಡಬೇಕು ಎಂದರು.
ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ನ ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್, ವಿದ್ಯಾರ್ಥಿಗಳು ತಮ್ಮನ್ನು ಸ್ವಚ್ಛತೆಯೊಂದಿಗೆ ಪರಿಸರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಶಾಲೆಯಲ್ಲಿ ಇಕೋ ಕ್ಲಬ್ ಮೂಲಕ ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಸಲಾಗುತ್ತಿದೆ ಎಂದರು.
ಬಿಇಓ ಕೆ.ವಿ.ಸುರೇಶ್ ಮಾತನಾಡಿ, ಮಕ್ಕಳು ಸ್ವಚ್ಛ ಶಾಲೆ – ಸ್ವಚ್ಛ ಪರಿಸರ ಸಂರಕ್ಷಣೆಗೆ ಪಣ ತೊಡಬೇಕು ಎಂದರು.
ತಹಶೀಲ್ದಾರ್ ಟಿ.ಎಂ.ಪ್ರಕಾಶ್, ಗ್ರಾ.ಪಂ.ಅಧ್ಯಕ್ಷೆ ಇಂದಿರಾ ರಮೇಶ್, ಪಿಡಿಓ ಎಂ.ಆರ್.ಸಂತೋಷ್, ಎಸ್.ಡಿ.ಎಂ.ಸಿ.ಅಧ್ಯಕ್ಷ ಎಸ್.ಎನ್.ಪುಟ್ಟಸ್ವಾಮಿ, ಆರ್.ಎಂ.ಎಸ್.ಎ. ಡಿವೈಪಿಸಿ ಸೌಮ್ಯ, ವಿಷಯ ಪರಿವೀಕ್ಷಕಿ ಕೆ.ಆರ್.ಬಿಂದು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ ಸದಾಶಿವಯ್ಯ ಎಸ್.ಪಲ್ಲೇದ್, ಪ್ರಾಥಮಿಕ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಕೆ.ಪಿ.ರೇವಣ್ಣ, ಸಮಿತಿ ಸದಸ್ಯರು ಹಾಜರಿದ್ದರು.
ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ ಕುರಿತ ಭಿತ್ತಿ ಫಲಕಗಳನ್ನು ಹಿಡಿದು ಪರಿಸರ ಸಂರಕ್ಷಣಾ ಘೋಷಣೆಗಳನ್ನು ಪ್ರಚುರಪಡಿಸಿದರು.
Breaking News
- *ಬಾಳುಗೋಡುವಿನಲ್ಲಿ ಸಂಭ್ರಮದ ಕೊಡವ ನಮ್ಮೆ : ಕೊಡವ ಸಂಸ್ಕೃತಿ, ಪರಂಪರೆಗಳ ಉಳಿವಿಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ*
- *ವಿರಾಜಪೇಟೆಯಲ್ಲಿ ಶಾಸಕರಿಂದ ಕೃಷಿ ಯಂತ್ರೋಪಕರಣ ವಿತರಣೆ*
- *ಮಡಿಕೇರಿ : ನ್ಯುಮೋನಿಯಾ ಯಶಸ್ವಿಯಾಗಿ ಕೊನೆಗೊಳಿಸಲು ಸಾಮಾಜಿಕ ಜಾಗೃತಿ ಅಭಿಯಾನ*
- *ಕೊಡಗು : ಪ್ರಧಾನಮಂತ್ರಿ 15 ಅಂಶದ ಕಾರ್ಯಕ್ರಮ ಪ್ರಗತಿ ಸಾಧಿಸಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ*
- *ಕೊಡಗು : ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಿ : ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಸೂಚನೆ*
- *ಮಡಿಕೇರಿಯ ಹೃದಯ ಭಾಗದಲ್ಲಿ ವಾಣಿಜ್ಯ ಸಂಕೀರ್ಣ ಮಾರಾಟಕ್ಕಿದೆ*
- *ನ.30 ರಂದು ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕೊಡಗು ಜಿಲ್ಲಾ ಪ್ರವಾಸ*
- *ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ*
- *ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು*
- *TO LET / ಬಾಡಿಗೆಗೆ*