ಮಡಿಕೇರಿ ಜೂ.2 : ಕೊಡಗು ಜಿಲ್ಲೆಯಲ್ಲಿರುವ ಪರಿಶಿಷ್ಟ ಪಂಗಡದ ವಾಲ್ಮೀಕಿ ಆಶ್ರಮ ಶಾಲೆಗಳಲ್ಲಿರುವ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಲಿಕೆಗಾಗಿ ಗೌರವಧನದ ಆಧಾರದ ಮೇಲೆ 11 ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂ.8 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿರುವಂತೆ ಗೌರವಧನ ಮಾಹೆಯಾನ ರೂ.10 ಸಾವಿರ ನಿಗಧಿಪಡಿಸಿದೆ. ಕಡ್ಡಾಯವಾಗಿ ಇಂಗ್ಲೀಷ್ ಐಚ್ಚಿಕ ವಿಷಯದಲ್ಲಿ ಡಿ.ಎಡ್ ಅಥವಾ ಬಿ.ಎಡ್ ಪೂರ್ಣಗೊಳಿಸಿದ ಅಭ್ಯರ್ಥಿಗಳಾಗಿರಬೇಕು. ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿನ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಮಂಡಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅರ್ಜಿಯನ್ನು ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿ, ಜಿಲ್ಲಾ ಪಂಚಾಯತ್ ಕಟ್ಟಡ ಇಲ್ಲಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ.08272-200500 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿ ಹೊನ್ನೇಗೌಡ ಅವರು ತಿಳಿಸಿದ್ದಾರೆ.











