ಮಡಿಕೇರಿ ಜೂ.2 : ಮೂರ್ನಾಡು ವಿದ್ಯಾಸಂಸ್ಥೆಯ ಪ್ರಥಮ ದರ್ಜೆ ಕಾಲೇಜು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮತ್ತು ಬೋಧಕ ಆಸ್ಪತ್ರೆ, ರಕ್ತನಿಧಿ ಕೇಂದ್ರ ಮಡಿಕೇರಿ, ಮೂರ್ನಾಡು ಪದವಿ ಕಾಲೇಜಿನ ರೆಡ್ ರಿಬ್ಬನ್ ಕ್ಲಬ್, ರೋಟರ್ಯಾಕ್ಟ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ಮೂರ್ನಾಡು ಪದವಿ ಕಾಲೇಜಿನಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.
ಸಾರ್ವಜನಿಕರು, ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಸುಮಾರು 50 ಮಂದಿ ರಕ್ತದಾನ ಮಾಡುವುದರ ಮೂಲಕ ಶಿಬಿರವನ್ನು ಯಶಸ್ವಿಗೊಳಿಸಿದರು.
ಈ ಸಂದರ್ಭದಲ್ಲಿ ಮೂರ್ನಾಡು ವಿದ್ಯಾಸಂಸ್ಥೆಯ ಅಧ್ಯಕ್ಷ ಬಾಚೆಟ್ಟಿರ ಜಿ.ಮಾದಪ್ಪ, ಕಾರ್ಯದರ್ಶಿ ಪೆಮ್ಮುಡಿಯಂಡ ವೇಣು ಅಪ್ಪಣ್ಣ, ನಿರ್ದೇಶಕ ನಂದೇಟಿರ ರಾಜಾ ಮಾದಪ್ಪ, ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ. ರೇಖಾ ಚಿಣ್ಣಪ್ಪ, ರೋಟರಿ ಮಡಿಕೇರಿ ವುಡ್ಸ್‍ನ ಕಾರ್ಯದರ್ಶಿ ವಸಂತ್ ಕುಮಾರ್, ವಿಕ್ರಂ, ಕಿಗ್ಗಾಲು ಹರೀಶ್, ಎನ್.ಸಿ.ನವೀನ್, ಬೋಪಣ್ಣ, ರೋಟರ್ಯಾಕ್ಟ್ ಕ್ಲಬ್‍ನ ಪದಾಧಿಕಾರಿಗಳು, ಸದಸ್ಯರು ಇದ್ದರು.











