ಮಡಿಕೇರಿ ಜೂ.2 : ಕರ್ನಾಟಕ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಿವಕುಮಾರ ರಂಗಪ್ರಯೋಗ ಶಾಲೆಯ 2023-24ನೇ ಸಾಲಿನ ರಂಗ ಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪ್ರವೇಶಕ್ಕೆ ಕನಿಷ್ಠ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿದ್ದು ಮತ್ತು ಪದವೀಧರರಿಗೆ ಆದ್ಯತೆ ಇರುತ್ತದೆ. ರಂಗಭೂಮಿಯಲ್ಲಿ ಆಸಕ್ತಿ ಇದ್ದು, ಸ್ವಲ್ಪಮಟ್ಟಿನ ಅನುಭವ ಇರಬೇಕು. ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಊಟ-ವಸತಿ ವ್ಯವಸ್ಥೆ ದೊರೆಯುತ್ತದೆ. ಕರ್ನಾಟಕ ಹಾಗೂ ಭಾರತದ ರಂಗ ತಜ್ಞರಿಂದ ಮತ್ತು ಅತಿಥ ಉಪನ್ಯಾಸಕರಿಂದ ತರಗತಿಗಳು ನಡೆಯುತ್ತವೆ.
ಒಳ್ಳೆಯ ಗ್ರಂಥಭಂಡಾರ ಹಾಗೂ ದೃಶ್ಯಶ್ರವ್ಯ ಪರಿಕರಗಳ ಅನುಕೂಲತೆ ಇದೆ. ರಂಗ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಭಾರತೀಯ ರಂಗಭೂಮಿ, ಕನ್ನಡ ಮತ್ತು ನಾಟಕ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಅಭಿನಯ, ಆಹಾರ್ಯ, ಶಿಕ್ಷಣದಲ್ಲಿ ರಂಗಭೂಮಿ, ಕುರಿತಾದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯುತ್ತವೆ.
ಪ್ರಾಚಾರ್ಯರು, ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆ, ಸಾಣೇಹಳ್ಳಿ 577515, ಹೊಸದುರ್ಗ ತಾಲ್ಲೂಕು, ಚಿತ್ರದುರ್ಗ ಜಿಲ್ಲೆ ಈ ವಿಳಾಸಕ್ಕೆ ಬರೆದು ಪ್ರವೇಶ ಅರ್ಜಿ ತರಿಸಿಕೊಳ್ಳಬಹುದು ಅಥವಾ ರಂಗಶಾಲೆಯ ವೆಬ್‍ಸೈಟ್ www.theatreschoolsanehalli.org ನಲ್ಲಿ ಪ್ರವೇಶ ಅರ್ಜಿ ಡೌನ್‍ಲೋಡ್ ಮಾಡಿ ಜೂನ್, 30 ರೊಳಗೆ ಅರ್ಜಿಯನ್ನು ರಂಗಶಾಲೆಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ. 9448398144, 8861043553 ಮತ್ತು 9482942394 ನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿ ಶಿವಕುಮಾರ ರಂಗಪ್ರಯೋಗಶಾಲೆಯ ಪ್ರಕಟಣೆ ತಿಳಿಸಿದೆ.
Breaking News
- *ವೀರ ಸೇನಾನಿಗಳಿಗೆ ಅಗೌರವ : ಕಿಡಿಗೇಡಿಯನ್ನು ಬಂಧಿಸಲು ನಾಪೋಕ್ಲು ಕೊಡವ ಸಮಾಜ ಒತ್ತಾಯ*
- *ಇಂದಿರಾ ನಗರ : ನೂತನ ಕಾಂಕ್ರೀಟ್ ರಸ್ತೆ ಉದ್ಘಾಟಿಸಿದ ಶಾಸಕ ಡಾ.ಮಂತರ್ ಗೌಡ*
- *ವೀರ ಸೇನಾನಿಗಳಿಗೆ ಅಪಮಾನ : ವ್ಯಾಲಿಡ್ಯೂ ಕೊಡವ ಕಲ್ಚರಲ್ ಅಸೋಸಿಯೇಷನ್ ಖಂಡನೆ*
- *ವೀರ ಸೇನಾನಿಗಳಿಗೆ ಅಗೌರವ : ಜಿಲ್ಲಾ ಬಿಜೆಪಿಯಿಂದ ಎಸ್ಪಿಗೆ ದೂರು*
- *ಮಡಿಕೇರಿಯಲ್ಲಿ ವಕೀಲರ ಸಂಘದಿಂದ ಪ್ರತಿಭಟನೆ*
- *ಜಿಲ್ಲಾ ಮಟ್ಟದ ಯುವಜನೋತ್ಸವ : ಹೆಸರು ನೋಂದಾಯಿಸಿಕೊಳ್ಳಲು ನ.28 ಕೊನೆ ದಿನ*
- *ನ.26 ರಂದು ಸಿಎನ್ಸಿಯಿಂದ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ನ.24 ರಂದು ಕೊಡಗು ಜಿಲ್ಲಾ ಕಿವುಡರ ಸಂಘದ ಸಭೆ*
- *ಕುಶಾಲನಗರದಲ್ಲಿ ಅಕ್ಷರ ಜ್ಯೋತಿ ಯಾತ್ರೆಗೆ ಸ್ವಾಗತ : ಉತ್ತಮ ಸಂಸ್ಕಾರ, ಸದ್ಗುಣ ಬೆಳೆಸಿಕೊಳ್ಳಲು ಬಸವಕುಮಾರ್ ಪಾಟೀಲ್ ಕರೆ*
- *ನ.29 ರಂದು ಮೂರ್ನಾಡುವಿನಲ್ಲಿ 69ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ*