ಬೆಂಗಳೂರು : ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ತಕ್ಷಣ ಘಟನಾ ಸ್ಥಳಕ್ಕೆ ತೆರಳಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಹಾಗೂ ಅವರಿಗೆ ಅಗತ್ಯ ನೆರವನ್ನು ಒದಗಿಸಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಜಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ಅಥವಾ ಇತರೆ ಯಾವುದೇ ಸಮಸ್ಯೆ ಎದುರಿಸುತ್ತಿರುವ ಕನ್ನಡಿಗರ ರಕ್ಷಣೆಗೆ ಸಂಪೂರ್ಣ ನೆರವು ನೀಡಲಾಗುವುದು. “ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ನಾಡಿಗೆ ಕರೆತರಲು ಸರ್ಕಾರ ಬದ್ಧವಿದೆ” ವಿದೆ ಎಂದರು.