ಮಡಿಕೇರಿ ಜೂ.3 : 2023-24 ಸಾಲಿಗೆ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕ/ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ,2 ಬಿ, 3ಎ ಹಾಗೂ 3ಬಿ, ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿಯು ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ ರೂ. 1 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.44,500 ಆಗಿದೆ.
ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ SATS ID ಯೊಂದಿಗೆ ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶದ ವಿಳಾಸ: https://shp.karnataka.gov.inನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂನ್ 15 ಕೊನೆ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಸಂಪರ್ಕಿಸಬಹುದಾಗಿದೆ. ಜಿಲ್ಲಾ ಕಚೇರಿ ಮಡಿಕೇರಿ ದೂರಾವಾಣಿ ಸಂಖ್ಯೆ 08272-295628, ಮಡಿಕೇರಿ ತಾಲ್ಲೂಕು ಕಚೇರಿ ಮೊಬೈಲ್ ಸಂಖ್ಯೆ-8762476790, ವಿರಾಜಪೇಟೆ ತಾಲ್ಲೂಕು ಕಚೇರಿ ಮೊಬೈಲ್ ಸಂಖ್ಯೆ-9844531040, ಸೋಮವಾರಪೇಟೆ ತಾಲ್ಲೂಕು ಕಚೇರಿ ಮೊಬೈಲ್ ಸಂಖ್ಯೆ-9481772143 ಯನ್ನು ಸಂಪರ್ಕಿಸಬಹುದು.