ವಿರಾಜಪೇಟೆ ಜೂ.6 : ಕೋಟೆಕೊಪ್ಪ ಗ್ರಾಮದಲ್ಲಿ ಪರಿಸರ ದಿನಾಚರಣೆ ಪ್ರಯುಕ್ತ ಗ್ರಾಮದ ಯುವಕರು ಗಿಡಗಳನ್ನು ನೆಟ್ಟು ಆ ಗಿಡಗಳನ್ನು ದತ್ತು ಪಡೆದು ಪೋಷಣೆ ಮಾಡುವ ಜವಾಬ್ದಾರಿಯನ್ನು ಹೊತ್ತು ಸಮಾಜಕ್ಕೆ ಕೊಡುಗೆಯಾಗಿ ನೀಡುವ ಸಂಕಲ್ಪವನ್ನು ಮಾಡುವುದರ ಮೂಲಕ ವಿನೂತನವಾಗಿ ಪರಿಸರ ದಿನಾಚರಣೆಯನ್ನು ಆಚರಿಸಿದರು.
ಈ ಸಂದರ್ಭ ಶಿಕ್ಷಕರಾದ ವಿ.ಆರ್.ಸಂದೀಪ್ ಮಾತನಾಡಿ, ಮಾನವನ ದುರಾಸೆಯಿಂದ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಅಂಶವೂ ಕಲುಷಿತಗೊಂಡಿದೆ. ಮನುಷ್ಯ ತನ್ನ ಅಭಿವೃದ್ಧಿಗಾಗಿ ತನಗೆ ಅರಿವಿಲ್ಲದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ. ಆದ್ದರಿಂದ ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಯಲ್ಲಿ ಪಾಲ್ಗೊಂಡು ಮುಂದಿನ ಪೀಳಿಗೆಗೆ ಪರಿಸರವನ್ನು ಕೊಡುಗೆಯಾಗಿ ನೀಡಬೇಕೆಂದು ಸಲಹೆ ನೀಡಿದರು.
ಗ್ರಾಮದ ಬೈತೂರೇಶ್ವರ ದೇವಸ್ಥಾನದ ಅಧ್ಯಕ್ಷರಾದ ವಿ.ಎಂ.ಶಿವರಾಜ್ ಮಾತನಾಡಿ, ಜನರು ಪರಿಸರಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಿ ಗಿಡಗಳನ್ನು ನೆಟ್ಟು ಪೋಷಿಸಬೇಕು. ಇದಕ್ಕೆ ಜನರ ಸಹಕಾರ ಅತೀ ಮುಖ್ಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ದೇವಸ್ಥಾನದ ಸದಸ್ಯರಾದ ವಿ.ಎನ್.ಗೋಪಿ, ವಿ. ಆರ್. ವಿಕಾಸ್, ವಿ.ಎಸ್.ಪ್ರಸನ್ನ, ವಿ.ಎಲ್. ಕಾರ್ತಿಕ್ ಮತ್ತು ಗ್ರಾಮದ ಪ್ರಮುಖರು ಪಾಲ್ಗೊಂಡಿದ್ದರು.
Breaking News
- *ಲಾರಿ ಡಿಕ್ಕಿಯಾಗಿ ಬಾಲಕಿ ಸಾವು*
- *ಅದವಿಯಾಗೆ ಅಭಿನಂದನೆ*
- *ನಿಧನ ಸುದ್ದಿ*
- *ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ*
- *ಕಾರಾಗೃಹ ವಾರ್ಡನ್ ಹುದ್ದೆಗೆ ಆಹ್ವಾನ*
- *ವೀರ ಸೇನಾನಿಗಳಿಗೆ ಅಗೌರವ : ಕುಲಾಲ ಕುಂಬಾರ ಸಂಘ ಖಂಡನೆ*
- *ಡಿ.1 ರಂದು ಜಿಲ್ಲಾ ಮಟ್ಟದ ಕ್ರಿಸ್ಮಸ್ ಕರೋಲ್ ಗಾಯನ ಸ್ಪರ್ಧೆ*
- *ಆರೋಪಿಯ ಗಡಿಪಾರಿಗೆ ಹಿಂದು ಜಾಗರಣ ವೇದಿಕೆ ಒತ್ತಾಯ*
- *ಸೋಮವಾರಪೇಟೆ ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿವಿಧ ಸ್ಪರ್ಧಾ ಕಾರ್ಯಕ್ರಮ*
- *ಸೋಮವಾರಪೇಟೆ : ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ : ಹಿರಿಯ ಸಿವಿಲ್ ನ್ಯಾಯಾಧೀಶ ಗೋಪಾಲಕೃಷ್ಣ*