ಮಡಿಕೇರಿ ಜೂ.6 : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಜೂ.14 ರಂದು ವಿರಾಜಪೇಟೆ ತಹಶೀಲ್ದಾರ್ ಕಚೇರಿ ಹಾಗೂ ಜೂ.16 ರಂದು ಮಡಿಕೇರಿ ತಹಶೀಲ್ದಾರ್ ಕಚೇರಿಗಳಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಯಿಂದ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ.
ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿಯ ದೂ.ಸಂ. 08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಕೋರಿದ್ದಾರೆ.
Breaking News
- *ಜಿಲ್ಲಾ ಮಟ್ಟದ ಚಾಂಪಿಯನ್ಶಿಪ್ನಲ್ಲಿ ನಾಟ್ಯಾಂಜಲಿ ನೃತ್ಯ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ*
- *ವೀರ ಸೇನಾನಿಗಳಿಗೆ ಅಗೌರವ : ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆ ಖಂಡನೆ : ಆರೋಪಿಯ ಗಡಿಪಾರಿಗೆ ಆಗ್ರಹ*
- *ದಿವ್ಯಜ್ಯೋತಿ ಪತ್ತಿನ ಸಹಕಾರ ಸಂಘದ ಚುನಾವಣೆ ಫಲಿತಾಂಶ*
- *ನ.29ರಂದು ಕೊಡಗು ಜಿಲ್ಲಾ ನಿವೃತ್ತ(ಮಾಜಿ) ಯೋಧರ ಒಕ್ಕೂಟ ಅರೆ ಸೇನಾಪಡೆಯ 12ನೇ ವಾರ್ಷಿಕ ಮಹಾಸಭೆ*
- *ನ.30 ರಂದು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜನಪದ ನೃತ್ಯ ಮತ್ತು ಟಿ.ಪಿ.ರಮೇಶ್ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ*
- *ಇಂಡಿಯನ್ ಫಿಲ್ಟರ್ ಕಾಫಿ ಚಾಂಪಿಯನ್ಶಿಪ್ : ಶಶಾಂಕ್ ರಾಜ್ಯಮಟ್ಟಕ್ಕೆ ಆಯ್ಕೆ*
- *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಮತ್ತು ಗೀತ ಗಾಯನ ಕಾರ್ಯಕ್ರಮ : ಮಕ್ಕಳಲ್ಲಿ ಕನ್ನಡ ಪ್ರೀತಿಯನ್ನು ಬೆಳೆಸಿ : ಎಂ.ಪಿ.ಕೇಶವ ಕಾಮತ್*
- *ನ.26ರಂದು ಸಿಎನ್ಸಿಯಿಂದ ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ಶಿಶು ಸಾಹಿತ್ಯದ ಪಿತಾಮಹ ಪಂಜೆ ಮಂಗೇಶರಾಯರು*
- *ಸುಂಟಿಕೊಪ್ಪದಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ ಕಾರ್ಯಕ್ರಮ : ಸಾಧಕರಿಗೆ ಸನ್ಮಾನ*