ಮಡಿಕೇರಿ ಜೂ.6 : ವಿರಾಜಪೇಟೆ ತಾಲ್ಲೂಕಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಕ್ಕೆ 2023-24 ನೇ ಸಾಲಿಗೆ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಶೇ.75 ಸ್ಥಾನಗಳು ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ ಮತ್ತು ಉಳಿದ ಶೇ.25 ಸ್ಥಾನಗಳು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಲಭ್ಯವಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 5 ನೇ ತರಗತಿಯಿಂದ 10 ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಆನ್‍ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿ ನಿಲಯಗಳಲ್ಲಿ ವಾರದ 7 ದಿನಗಳಲ್ಲಿ ಪೌಷ್ಠಿಕಯುಕ್ತ ಊಟ ತಿಂಡಿ ವ್ಯವಸ್ಥೆ, ಉಚಿತವಾಗಿ ವಸತಿ, ಪುಸ್ತಕ, ಲೇಖನ ಸಾಮಗ್ರಿ, ಸಮವಸ್ತ್ರ, ಶೂ ಮತ್ತು ಸಾಕ್ಸ್ ವಿತರಣೆ, ವೈದ್ಯಕೀಯ ತಪಾಸಣೆ, ಅಂಶಕಾಲಿಕ ಬೋಧಕರಿಂದ ವಿಶೇಷ ಬೋಧನೆ ವ್ಯವಸ್ಥೆ, ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ, ಬಾಲಕಿಯರಿಗೆ ಒನಕೆ ಓಬವ್ವ ಆತ್ಮ ರಕ್ಷಣಾ ಕೌಶಲ್ಯ ತರಬೇತಿಯನ್ನು ನೀಡಲಾಗುವುದು. ನಿಲಯಗಳ ವಿವರ ನೀಡಲಾಗಿದೆ.
ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ https://shp.karnataka.gov.in ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಿ, ಈ ಅರ್ಜಿಯೊಂದಿಗೆ ವಿದ್ಯಾರ್ಥಿಯ ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಹಿಂದಿನ ವರ್ಷದ ಅಂಕಪಟ್ಟಿ (ಸ್ಯಾಟ್ಸ್ ನಂಬರ್‍ನೊಂದಿಗೆ) ಭಾವಚಿತ್ರ ಹಾಗೂ ಪೋಷಕರ ಆಧಾರ್ ಕಾರ್ಡ್ ಪ್ರತಿಯನ್ನು ಸಂಬಂಧಿಸಿದ ನಿಲಯಗಳ ವಾರ್ಡನ್‍ರವರಿಗೆ ಸಲ್ಲಿಸಬೇಕು.
ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ, ಪೊನ್ನಂಪೇಟೆ, ಪಾಲಿಬೆಟ್ಟ 9611296776, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಬಾಳೆಲೆ 9611296776, ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ, ವಿರಾಜಪೇಟೆ 9606702805, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಪೊನ್ನಂಪೇಟೆ 7899323860 ಹಾಗೂ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ವಿರಾಜಪೇಟೆ ಹಾಗೂ ಕಾಕೋಟುಪರಂಬು 8105051491 ಹಾಗೂ ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ. 08274-249476 ಹಾಗೂ 9480843157 ನ್ನು ಸಂಪರ್ಕಿಸಬಹುದು ಎಂದು ಪೊನ್ನಂಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Breaking News
- *ಇಂಡಿಯನ್ ಫಿಲ್ಟರ್ ಕಾಫಿ ಚಾಂಪಿಯನ್ಶಿಪ್ : ಶಶಾಂಕ್ ರಾಜ್ಯಮಟ್ಟಕ್ಕೆ ಆಯ್ಕೆ*
- *ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ರಸ ಪ್ರಶ್ನೆ ಸ್ಪರ್ಧೆ ಮತ್ತು ಗೀತ ಗಾಯನ ಕಾರ್ಯಕ್ರಮ : ಮಕ್ಕಳಲ್ಲಿ ಕನ್ನಡ ಪ್ರೀತಿಯನ್ನು ಬೆಳೆಸಿ : ಎಂ.ಪಿ.ಕೇಶವ ಕಾಮತ್*
- *ನ.26ರಂದು ಸಿಎನ್‌ಸಿಯಿಂದ ಮಡಿಕೇರಿ ಸಮೀಪ ಕ್ಯಾಪಿಟಲ್ ವಿಲೇಜ್ ನಲ್ಲಿ ಕೊಡವ ನ್ಯಾಷನಲ್ ಡೇ ಮತ್ತು ಸಂವಿಧಾನ ದಿನಾಚರಣೆ*
- *ಶಿಶು ಸಾಹಿತ್ಯದ ಪಿತಾಮಹ ಪಂಜೆ ಮಂಗೇಶರಾಯರು*
- *ಸುಂಟಿಕೊಪ್ಪದಲ್ಲಿ ಹಳೆ ವಿದ್ಯಾರ್ಥಿಗಳ ಸ್ನೇಹಮಿಲನ ಕಾರ್ಯಕ್ರಮ : ಸಾಧಕರಿಗೆ ಸನ್ಮಾನ*
- *ಹೆಗ್ಗಳ ಶ್ರೀ ಗೋಪಾಲಕೃಷ್ಣ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವಾರ್ಷಿಕ ಮಹಾಪೂಜೆ*
- *ಕೂತಿನಾಡು : ದೇವಾಲಯದ ಜೀರ್ಣೋದ್ಧಾರಕ್ಕೆ ಆರೋಡ ತಾಂಬೂಲ ಪ್ರಶ್ನೆ*
- *ಮಡಿಕೇರಿ : ಜನರಲ್ ತಿಮ್ಮಯ್ಯ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ*
- ಕುಶಾಲನಗರ ಕನ್ನಡ ಭಾರತಿ ಕಾಲೇಜಿನಲ್ಲಿ ಅಕ್ಷರ ಜ್ಯೋತಿ ಯಾತ್ರೆ ಕುರಿತು ಉಪನ್ಯಾಸ : ವಿದ್ಯಾರ್ಥಿಗಳಲ್ಲಿ ಉತ್ತರ ಪ್ರೇರಣೆ, ಸ್ಫೂರ್ತಿ ಬೆಳೆಸಬೇಕು : ಬಸವಕುಮಾರ್ ಪಾಟೀಲ್*
- *ಶ್ರದ್ಧಾಭಕ್ತಿಯಿಂದ ಜರುಗಿದ ಅರಪಟ್ಟು ಶ್ರೀ ಅಯ್ಯಪ್ಪ ಸ್ವಾಮಿ ವಾರ್ಷಿಕ ಮಹಾಪೂಜೆ*