ಮಡಿಕೇರಿ ಜೂ.6 : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯು ಜೂ.8 ರಂದು ಆರಂಭವಾಗಲಿದೆ.
ಆಸಕ್ತರು ಜೂ.7 ರೊಳಗೆ ಬೆಳಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ಮೈಸೂರಿನಲ್ಲಿರುವ ಕೇಂದ್ರ ಕಚೇರಿಗೆ ಆಗಮಿಸಿ ಹೆಸರು ನೋಂದಾಯಿಸಿ ತರಬೇತಿ ಪಡೆಯಬಹುದು. ಹೆಚ್ಚಿನ ವಿವರಗಳಿಗೆ ದೂ.ಸಂ.0821-2515944, 9964760090 ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಕುಲಸಚಿವರು ತಿಳಿಸಿದ್ದಾರೆ.











