ನಾಪೋಕ್ಲು ಜೂ.7 : ನಾಪೋಕ್ಲು ವಿನ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಶಾಲೆಯಲ್ಲಿ ನಡೆದ ಕಾರ್ಯಕ್ರಮವನ್ನು ನಾಪೋಕ್ಲು ಠಾಣಾಧಿಕಾರಿ ಮಂಜುನಾಥ್ ಗಿಡ ನೆಡುವುದರ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು ಪರಿಸರ ದಿನಾಚರಣೆಯು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಿರಬಾರದು, ಪರಿಸರವನ್ನು ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ, ಗಿಡವನ್ನು ನೆಟ್ಟರೆ ಸಾಲದು ಅದು ಬೆಳೆಯುವ ತನಕ ಅದನ್ನು ಪೋಶಿಸುವಂತ್ತಾಗಬೇಕು ಎಂದರು.ಪ್ರತಿಯೊಬ್ಬರು ತಮ್ಮ ಶಾಲೆ ಮತ್ತು ಮನೆಯ ಸುತ್ತಮುತ್ತಲಿನ ವಠಾರದಲ್ಲಿ ಗಿಡಗಳನ್ನು ನೆಟ್ಟು ಪರಿಸರವನ್ನು ಕಾಪಾಡಬೇಕು.ಅದರಂತೆ ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿತ್ವವನ್ನು ಹೊಂದಿಕೊಳ್ಳಬೇಕೆಂದು ಸಲಹೆ ನೀಡಿದರು.ಬಳಿಕ ಶಾಲೆಯ ವಠಾರ ಹಾಗೂ ತರಗತಿಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಅವರು ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಶುಭ ಹಾರೈಸಿದರು.
ಶಾಲೆಯ ಆಡಳಿತ ಮಂಡಳಿ ಉಪಾಧ್ಯಕ್ಷ ಕೆ. ಎ. ಹಾರಿಸ್ ದಿನದ ಮಹತ್ವದ ಕುರಿತು ಮಾತನಾಡಿದರು.
ಬಳಿಕ ಶಾಲಾ ವಠಾರದಲ್ಲಿ ವಿವಿಧ ತಳಿಯ ಮರದ ಸಸ್ಯಗಳನ್ನು ನೆಡಲಾಯಿತು.
ಈ ಸಂದರ್ಭ ಶಾಲೆಯ ಪ್ರಭಾರ ಉಪ ಪ್ರಾಂಶುಪಾಲ ಎನ್. ಎಸ್. ಶಿವಣ್ಣ, ಶಾಲೆಯ ಉಪನ್ಯಾಸಕ ಹಾಗೂ ಶಿಕ್ಷಕವೃಂದ,ಆಡಳಿತ ಮಂಡಳಿ ಸದಸ್ಯರು, ನಾಪೋಕ್ಲು ಠಾಣೆಯ ಸಿಬ್ಬಂದಿಗಳಾದ ಷರೀಫ್, ಶರತ್, ಪೋಷಕರು ವಿದ್ಯಾರ್ಥಿಗಳು ಮತ್ತಿತರರು ಹಾಜರಿದ್ದರು.
ವರದಿ :ಝಕರಿಯ ನಾಪೋಕ್ಲು