ಮಡಿಕೇರಿ ಜೂ.6 : ಕರ್ನಾಟಕ ಅರಣ್ಯ ಇಲಾಖೆ ಭಾಗಮಂಡಲ ವಲಯ ಮತ್ತು ಕೆವಿಜಿ ಐಟಿಐ ಸಹಯೋಗದಲ್ಲಿ ಕೆವಿಜಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ವಲಯ ಅರಣ್ಯಾಧಿಕಾರಿ ರವೀಂದ್ರ ಮಾತನಾಡಿ, ಅರಣ್ಯ ಇಲಾಖೆ, ಪರಿಸರ ಮತ್ತು ಮನುಷ್ಯನ ನಡುವಿನ ಸಂಬಂಧ, ಪರಿಸರ ದಿನಾಚರಣೆ ಮಹತ್ವವನ್ನು ಹೇಳಿದರು.
ಈ ಸಂದರ್ಭದಲ್ಲಿ ಇಲಾಖೆ ವತಿಯಿಂದ ವಿತರಿಸಲಾದ ಗಿಡಗಳನ್ನು ಸಂಸ್ಥೆ ಆವರಣದಲ್ಲಿ ವಿದ್ಯಾರ್ಥಿಗಳ ನೇತೃತ್ವದಲ್ಲಿ ನೆಡಲಾಯಿತು.
ಕಾರ್ಯಕ್ರಮದಲ್ಲಿ ಉಪವಲಯ ಅರಣ್ಯ ಅಧಿಕಾರಿಗಳಾದ ಶ್ರೀಧರ್, ನಂದಿನಿ, ಭಾಗಮಂಡಲ ಅರಣ್ಯ ಇಲಾಖೆ ಸಿಬ್ಬಂದಿಗಳು ಮತ್ತು ಕೈಗಾರಿಕಾ ತರಬೇತಿ ಸಂಸ್ಥೆಯ ಬೋಧಕ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದರು.