ಮಡಿಕೇರಿ ಜೂ.6 : ಅಪ್ಪಂಗಳದ ಐಸಿಎಆರ್-ಭಾರತೀಯ ಸಂಬಾರ ಬೆಳೆಗಳ ಸಂಶೋಧನ ಸಂಸ್ಥೆ, ಪ್ರಾದೇಶಿಕ ಕೇಂದ್ರದ ವತಿಯಿಂದ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಪ್ರಾದೇಶಿಕ ಕೇಂದ್ರದ ಆವರಣದಲ್ಲಿ ಹಣ್ಣಿನ ಮರದ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು.
ವಿಜ್ಞಾನಿ ಡಾ.ಬಾಲಾಜಿ ರಾಜ್ ಕುಮಾರ್ ಅವರು ಮಾತನಾಡಿ ಲೈಫ್ ಮಿಷನ್ ವಿಷಯದ ಕುರಿತು ವಿವರಿಸಿದರು ಹಾಗೂ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು, ಹೆಚ್ಚು ಮರಗಳನ್ನು ನೆಡುವುದು, ನೈಸರ್ಗಿಕ ಸಂಪನ್ಮೂಲಗಳು ಮತ್ತು ಜಲಮೂಲಗಳ ಸಂರಕ್ಷಣೆಗೆ ಒತ್ತು ನೀಡುವಂತೆ ಕರೆ ನೀಡಿದರು.
ಪ್ರಾದೇಶಿಕ ಕೇಂದ್ರದ ಆವರಣದಲ್ಲಿ ವಿವಿಧ ಹಣ್ಣಿನ ಮರದ ಸಸಿಗಳನ್ನು ನೆಡಲಾಯಿತು. ನಂತರ ಪ್ರಾದೇಶಿಕ ಕೇಂದ್ರದ ಸಿಬ್ಬಂದಿಗಳು ಬೆಟ್ಟಗೇರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಸೇರಿ ಶಾಲಾ ಆವರಣದಲ್ಲಿ ವಿವಿಧ ಹಣ್ಣಿನ ಮರದ ಸಸಿಗಳನ್ನು ನೆಡಲಾಯಿತು.
Breaking News
- *ವಾರ ಭವಿಷ್ಯ: ನ.25 ರಿಂದ ನ.30ರ ವರೆಗಿನ ಆರುದಿನಗಳು ಹೇಗಿರಲಿದೆ…?
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*
- *ದೇಶ ದ್ರೋಹದ ಪ್ರಕರಣ ದಾಖಲಿಸಲು ಕೆ.ಜಿ.ಬೋಪಯ್ಯ ಆಗ್ರಹ*
- *ಬಿಜೆಪಿ, ಜೆಡಿಎಸ್ ಗೆ ಜನ ತಕ್ಕ ಪಾಠ ಕಲಿಸಿದ್ದಾರೆ : ಎಂ.ಎ.ಕಲೀಲ್ ಬಾಷ*
- *ಕೆವಿ ಎನ್ಸಿಸಿ ಕೆಡೆಟ್ ಗಳಿಂದ ಕಾಯ೯ಪ್ಪ ಪ್ರತಿಮೆ ಸ್ವಚ್ಛತೆ*