ಮಡಿಕೇರಿ ಜೂ.6 : ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ ಹಾಗೂ ಪೊನ್ನಂಪೇಟೆ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡುವ ಸಂಬಂಧ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಮಡಿಕೇರಿ, ಸೋಮವಾರಪೇಟೆ ಮತ್ತು ಪೊನ್ನಂಪೇಟೆಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳ ಬಗ್ಗೆ ಆಕ್ಷೇಪಣೆಗಳು ಇದ್ದಲ್ಲಿ ಜೂ.15 ರೊಳಗೆ ಕಚೇರಿ ವೇಳೆ 5.30 ಒಳಗೆ ಸಂಬಂಧಿಸಿದ ಯೋಜನಾ ಕಚೇರಿಗೆ ಸಲ್ಲಿಸತಕ್ಕದ್ದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಮಂಜುನಾಥ್ ತಿಳಿಸಿದ್ದಾರೆ.












