ಮಡಿಕೇರಿ ಜೂ.7 : ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ವಿದ್ಯ ಸಂಸ್ಥೆಯ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ ಮಾತನಾಡಿ, ಪರಿಸರವನ್ನು ಉಳಿಸುವುದು ಮತ್ತು ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಈ ಬಗ್ಗೆ ವಿದ್ಯಾರ್ಥಿ ದೆಸೆಯಿಂದಲೇ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಬಾಳೆಲೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿಮ್ಮಣಮಾಡ ಕೃಷ್ಣ ಗಣಪತಿ ಮಾತನಾಡಿ, ಜಾಗತಿಕ ತಾಪಮಾನದ ಏರಿಕೆಗೆ ಪರಿಸರ ನಾಶವೇ ಕಾರಣ. ವಿದ್ಯಾರ್ಥಿಗಳು ಪರಿಸರದ ಬಗೆಗಿನ ಕಾಳಜಿಯನ್ನು ಅಧ್ಯತಾ ಕಾರ್ಯವಾಗಿ ಮೈಗೂಡಿಸಿಕೊಳ್ಳಬೇಕಾಗಿದೆಯೆಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಸಹ ಕಾರ್ಯದರ್ಶಿ ಪೊಡಮಾಡ ಮೋಹನ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ್, ಉಪನ್ಯಾಸಕರಾದ ಪ್ರತಿಭಾ ಉತ್ತಪ್ಪ, ರಾಘವೇಂದ್ರ, ತಿಮ್ಮರಾಜು, ಸುಬ್ಬಯ್ಯ ಸೇರಿದಂತೆ ಇತರ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಸಸಿ ನಡುವುದರ ನಂತರ ಬಾಳೆಲೆ ಪಟ್ಟಣದಲ್ಲಿ ಪರಿಸರ ಜಾಗೃತಿ ಮೂಡಿಸುವ ಭಿತ್ತಿ ಪತ್ರ ಪ್ರದರ್ಶನ ಹಾಗೂ ಘೋಷಣೆ ಜಾಗೃತಿ ಮೂಡಿಸಲಾಯಿತು.