ಸೋಮವಾರಪೇಟೆ ಜೂ.7 : ಬೆಟ್ಟದಳ್ಳಿ ಗ್ರಾ.ಪಂ ವ್ಯಾಪ್ತಿಯ ಶಾಂತ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಪ್ರತಿನಿತ್ಯ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮಾತ್ರ ಪೂಜಾ ಕೈಂಕರ್ಯಗಳು ನಡೆಯಲಿದೆ ಎಂದು ದೇವಾಲಯ ಆಡಳಿತ ಮಂಡಳಿ ತಿಳಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಡಳಿತ ಮಂಡಳಿ ಅಧ್ಯಕ್ಷ ಟಿ.ಪಿ.ಚಂಗಪ್ಪ, ಕುಮಾರಳ್ಳಿ ಗ್ರಾಮ ಪುಷ್ಪಗಿರಿ ತಪ್ಪಲಿನಲ್ಲಿರುವ ಈ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯ ಭಕ್ತಾಧಿಗಳು, ಯಾತ್ರಾರ್ಥಿಗಳು ಬರುತ್ತಾರೆ. ಹೊರ ಜಿಲ್ಲೆ, ಹೊರ ರಾಜ್ಯದಿಂದಲೂ ಭಕ್ತಾದಿಗಳು ಬರುತ್ತಾರೆ. ದೇವಸ್ಥಾನದ ಮೊದಲ ಪೂಜೆ ಬೆಳಿಗ್ಗೆ 8 ಗಂಟೆಯಿಂದ 10-30 ರವರೆಗೆ, ಮಧ್ಯಾಹ್ನ 12.45ರಿಂದ 2 ಗಂಟೆಯವರೆಗೆ ಪೂಜೆ ನಡೆಯಲಿದೆ. ಸಂಜೆ 4ರವರೆಗೆ ದೇವಸ್ಥಾನದ ಬಾಗಿಲು ತೆರೆದಿರುತ್ತದೆ. ಭಕ್ತಾದಿಗಳು, ಯಾತ್ರಾರ್ಥಿಗಳು ಸಹಕರಿಸಬೇಕೆಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ದೇವಾಲಯ ಆಡಳಿತ ಮಂಡಳಿ ಕಾರ್ಯದರ್ಶಿ ಡಿ.ಬಿ.ವಿಜಯ ಕುಮಾರ್,ಸದಸ್ಯರಾದ ಡಿ.ಬಿ.ಮೊಗಪ್ಪ ಇದ್ದರು.








