ನಾಪೋಕ್ಲು ಜೂ.7 : ಮರಂದೋಡ ಗ್ರಾಮದ ಕೇಕುಮಾನಿ ಶ್ರೀ ಭಗವತಿ, ಭದ್ರಕಾಳಿ ದೇವರ ಉತ್ಸವವು ಶ್ರದ್ಧಾಭಕ್ತಿಯಿಂದ ನಡೆಯಿತು.
ಎರಡು ವರ್ಷಕ್ಕೊಮ್ಮೆ ಉತ್ಸವ ನಡೆಯುವುದು ಇಲ್ಲಿನ ವಿಶೇಷ.
ಮುಂಜಾನೆ ಕಲಿಯಪಾತ್ರೆಯನ್ನು ಪ್ರತಿ ಕುಟುಂಬದಿಂದ ದೇವಾಲಯಕ್ಕೆ ತರಲಾಯಿತು. ಮಧ್ಯಾಹ್ನ ಎತ್ತುಪೋರಾಟ ಹಾಗೂ ಬೊಳಕಾಟ್ ನಡೆದ ಬಳಿಕ ಮಹಾಪೂಜೆಗಳು ಜರುಗಿದವು.
ನಂತರ ಅಯ್ಯಪ್ಪ ಮತ್ತು ಶಾಸ್ತಾವು ತೆರೆಗಳು ಜರುಗಿ ಮಧ್ಯಾಹ್ನ ಭದ್ರಕಾಳಿ ಮತ್ತು ಪಡಮಾಳಿ ತೆರೆಗಳು ನೆರವೇರಿತು.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹರಕೆ ಕಾಣಿಕೆ ಒಪ್ಪಿಸಿದರು.
ಈ ಸಂದರ್ಭ ತಕ್ಕ ಮುಖ್ಯಸ್ಥರಾದ ಮಾರ್ಚಂಡ ರಮೇಶ್ ಅಯ್ಯಪ್ಪ, ಮುಕ್ಕಾಟಿರ ರಮೇಶ್, ಲಾಲು ಚಿಣ್ಣಪ್ಪ, ಚಂಗೊಲು ಚಂಡಿರ ಉತ್ತಪ್ಪ ಮತ್ತು 13 ಕುಟುಂಬಸ್ಥರು ಪಾಲ್ಗೊಂಡಿದ್ದರು.
ವರದಿ : ದುಗ್ಗಳ ಸದಾನಂದ