ನಾಪೋಕ್ಲು ಮಾ.7 : ನಾಪೋಕ್ಲುವಿನ ವಿವಿಧ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಪೋಕ್ಲು ಪೊಲೀಸ್ ಠಾಣೆಯ ಠಾಣಾಧಿಕಾರಿ ಮಂಜುನಾಥ್ ಪಾಲ್ಗೊಂಡು ಮಾತನಾಡಿ, ಪರಿಸರ ದಿನಾಚರಣೆಯು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗಿರಬಾರದು, ಪರಿಸರವನ್ನು ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ, ಗಿಡವನ್ನು ನೆಟ್ಟರೆ ಸಾಲದು. ಅದು ಬೆಳೆಯುವ ವರೆಗೆ ಅದನ್ನು ಪೋಶಿಸುವಂತ್ತಾಗಬೇಕು ಎಂದರು.
ಶಾಲೆಯ ಪ್ರಭಾರ ಉಪ ಪ್ರಾಂಶುಪಾಲ ಎನ್.ಎಸ್.ಶಿವಣ್ಣ, ಶಾಲೆಯ ಉಪನ್ಯಾಸಕ ಹಾಗೂ ಶಿಕ್ಷಕವೃಂದ, ಆಡಳಿತ ಮಂಡಳಿ ಸದಸ್ಯರು, ಪೋಷಕರು ವಿದ್ಯಾರ್ಥಿಗಳು ಹಾಜರಿದ್ದರು.
ನಾಪೋಕ್ಲುವಿನ ಕೆಪಿಎಸ್, ಶ್ರೀರಾಮ ಟ್ರಸ್ಟ್, ಸೆಕ್ರೆಡ್ ಹಾರ್ಟ್, ಹೊದವಾಡ ಸರ್ಕಾರಿ ಪ್ರೌಢಶಾಲೆ ಸೇರಿದಂತೆ ಹಲವು ಶಾಲೆಗಳಲ್ಲಿ ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ವರದಿ : ದುಗ್ಗಳ ಸದಾನಂದ