ಸುಂಟಿಕೊಪ್ಪ ಜೂ.7 : ಕೊಡಗು ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆ ಕುಶಾಲನಗರ ತಾಲ್ಲೂಕು ತಹಸೀಲ್ದಾರ್‌ರ ಮಾರ್ಗದರ್ಶನದಡಿ ಸುಂಟಿಕೊಪ್ಪ ಉಪ ತಹಸೀಲ್ದಾರ್ ನೇತೃತ್ವದಲ್ಲಿ ನಾಡ ಕಚೇರಿ ಸಭಾಂಗಣದಲ್ಲಿ ಪೌತಿ ಖಾತೆ ಆಂದೋಲನ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಪತಹಸೀಲ್ದಾರ್ ಶಿವಪ್ಪ ಮಾತನಾಡಿ, ಸರಕಾರ ಮಹತ್ತರ ಯೋಜನೆಗಳಲ್ಲಿ ಪೌತಿ ಖಾತೆ ಆಂದೋಲನ ಒಂದಾಗಿದೆ. ಪೌತಿಖಾತೆ ಹೊಂದಲು ರೈತಾಪಿ ವರ್ಗದವರು ಕಛೇರಿಯಿಂದ ಕಛೇರಿಗಳಿಗೆ ಅಲೆಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಪ್ರತಿ ಗ್ರಾಮಗಳಲ್ಲಿ ಅಧಿಕಾರಿಗಳನ್ನು ಕಳುಹಿಸಿ ಪೌತಿ ಖಾತೆ ದಾಖಲೆ ಮಾಡಿಕೊಡಲಾಗುತ್ತಿದೆಯೆಂದು ತಿಳಿಸಿದರು.
ಸುಂಟಿಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಸಂಬಂಧಿಸಿದಂತೆ ಅಯೋಜಿತ ಕಾರ್ಯಕ್ರಮದಲ್ಲಿ ಸುಂಟಿಕೊಪ್ಪ, ಉಲುಗುಲಿ ಹಾಗೂ ನಾರ್ಗಾಣೆ ಗ್ರಾಮದ ಕೃಷಿಕರು ಹಾಗೂ ಸಾರ್ವಜನಿರು ಪಾಲ್ಗೊಂಡಿದ್ದರು.
ಈ ಸಂದರ್ಭ ಕಂದಾಯ ಪರಿವೀಕ್ಷಕರಾದ ಪ್ರಶಾಂತ್,ಗ್ರಾಮ ಲೆಕ್ಕಿಗರಾದ ನಾಗೇಂದ್ರ, ಜಯಂತ್, ನಸೀಮ ಹಾಗೂ ಗ್ರಾಮ ಸಹಾಯಕರು ಇದ್ದರು.