ಮಡಿಕೇರಿ ಜೂ.7 : ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ರಾಮನ್ ಸಂಶೋಧನಾ ಸಂಸ್ಥೆಯ(ಆರ್‍ಆರ್‍ಐ) 75ನೇ ವಾರ್ಷಿಕೋತ್ಸವ ಹಾಗೂ ಬೆಂಗಳೂರು ಪರಿಸರ ಸಂಘದ(ಇಎಬಿ) 25ನೇ ವಾರ್ಷಿಕೋತ್ಸವದ ಅಂಗವಾಗಿ ಪದವಿ ಮತ್ತು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳಿಗಾಗಿ ಅರ್ಬನ್ ಮ್ಯಾನೇಜ್‍ಮೆಂಟ್ ಅಂಡ್ ವಾಟರ್ ಕನ್ಸರ್‍ವೇಷನ್’ ವಿಷಯದ ಬಗ್ಗೆ ರಾಜ್ಯ ಮಟ್ಟದ ರಸಪ್ರಶ್ನೆ ಸ್ಪರ್ಧೆ (ವಿಳಾಸ: ಲಿಖಿತ ಮತ್ತು ಮೌಖಿಕ) ಜೂ.27 ರಂದು ಅಕಾಡೆಮಿಯ ಕಚೇರಿಯಲ್ಲಿ (ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ, ಪ್ರೊ.ಯು.ಆರ್.ರಾವ್ ವಿಜ್ಞಾನ ಭವನ, ಜಿಕೆವಿಕೆ ಆವರಣ, ಮೇಜರ್ ಸಂದೀಪ್ ಉನ್ನಿಕೃಷ್ಣನ್ ರಸ್ತೆ, ವಿದ್ಯಾರಣ್ಯಪುರ ಪೋಸ್ಟ್, ಬೆಂಗಳೂರು-560097 ದೂ.ಸಂ.080-29721550) ನಡೆಯಲಿದೆ.
ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಚಿಸುವ ವಿದ್ಯಾರ್ಥಿಗಳು ಜೂ.23 ರೊಳಗೆ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಅಕಾಡೆಮಿಯ ವೆಬ್‍ಸೈಟ್ www.kstacademy.in ವೀಕ್ಷಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಎಂ.ರಮೇಶ್ ತಿಳಿಸಿದ್ದಾರೆ.












