ಮಡಿಕೇರಿ ಜೂ.7 : ರಾಜ್ಯ ವಿಧಾನ ಪರಿಷತ್‍ನ ತೆರವಾಗಿರುವ ಮೂರು ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಈ ಸಂದರ್ಭ ಕೊಡಗಿಗೆ ಒಂದು ಸ್ಥಾನವನ್ನಾದರೂ ನೀಡಬೇಕೆಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ಹಾಗೂ ವಕ್ತಾರ ತೆನ್ನೀರ ಮೈನಾ ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕೀಯ ಪ್ರಾತಿನಿಧ್ಯದಿಂದ ವಂಚಿತವಾಗಿರುವ ಕೊಡಗು ಜಿಲ್ಲೆಗೆ ಜೂ.30 ರಂದು ನಡೆಯಲಿರುವ ಎಂ.ಎಲ್.ಸಿ. ಚುನಾವಣೆಯಲ್ಲಿ ಒಂದು ಸ್ಥಾನವನ್ನಾದರು ನೀಡಬೇಕು ಎಂದ ಒತ್ತಾಯಿಸಿದ ಅವರು, ಕೊಡಗು ಜಿಲ್ಲಾ ಕಾಂಗ್ರೆಸ್‍ನಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಮುಖ್ಯ ಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಹಕ್ಕೊತ್ತಾಯ ಮಂಡಿಸಲಾಗುವುದು ಎಂದು ತಿಳಿಸಿದರು.
ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಪೆಟ್ರೋಲ್, ಡೀಸೆಲ್, ಅಕ್ಕಿ, ಎಣ್ಣೆ, ಗ್ಯಾಸ್ ಸೇರಿದಂತೆ ಅಗತ್ಯ ವಸ್ತುಗಳಿಗೆ ಬೆಲೆ ಏರಿಕೆಯಾದಾಗ ಸಮರ್ಥಿಸಿಕೊಂಡಿದ್ದವರು, ಈಗ ಬೀದಿಗೆ ಬಂದು ನಿಂತಿರುವುದು ಎಷ್ಟು ಸರಿ. ಬೆಲೆ ಏರಿಕೆ ಬಗ್ಗೆ ಪ್ರಶ್ನೆ ಮಾಡುವ ನೈತಿಕತೆಯನ್ನು ಬಿಜೆಪಿ ಕಳೆದುಕೊಂಡಿದ್ದು, ಜನ ಬಿಜೆಪಿಯನ್ನು ಜಿಲ್ಲೆ ಹಾಗೂ ರಾಜ್ಯದಲ್ಲಿ ಬೀದಿಗೆ ತಂದಿದ್ದಾರೆ. ಇದನ್ನು ಮರೆಮಾಚಲು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಟೀಕಿಸಿದರು.
ಕಾಂಗ್ರೆಸ್ ಸರ್ಕಾರದ ಐದು ಯೋಜನೆಗಳ ಗ್ಯಾರಂಟಿ ಕಾರ್ಡ್‍ನ್ನು ಬಿಜೆಪಿ, ಬೋಗಸ್ ಕಾರ್ಡ್ ಎಂದು ಟೀಕಿಸಿತ್ತು. ಆದರೆ ಜನ ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಟ್ಟು ಬಹುಮತ ನೀಡಿದ್ದಾರೆ. ಆದ್ದರಿಂದ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುವುದು ಬೇಡ. ಇದು ಮಹಿಳೆಯರ ಆರ್ಥಿಕ ಹೊರೆ ಕಡಿಮೆ ಮಾಡಲಿದ್ದು, ಬಿಟ್ಟಿ ಭಗ್ಯವಲ್ಲ, ಕಾಂಗ್ರೆಸ್‍ನ ಅಗತ್ಯ ಸೇವೆಯಾಗಿದೆ ಎಂದು ಸಮರ್ಥಿಸಿಕೊಂಡರು.
ನಗರಸಭೆ ಸೂಪರ್ ಸೀಡ್ ಎಚ್ಚರಿಕೆ : ಮಡಿಕೇರಿ ನಗರದಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು, ನಗರಸಭೆಯ ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದಿಂದ ಎರಡು ಮೋಟಾರುಗಳು ಕೆಟ್ಟುಹೋಗಿದೆ. ಇದರಿಂದ ಜನ ಪರದಾಡುವಂತಾಗಿದ್ದು, ಮಡಿಕೇರಿ ಕ್ಷೇತ್ರದ ಶಾಸಕ ಮಂಥರ್ ಗೌಡ ಅವರು ತಮ್ಮ ಅನುದಾನದಲ್ಲಿ ಸುಸಜ್ಜಿತ ಮೋಟರ್ ಅಳವಡಿಸಲು ನಿರ್ಧರಿಸಿದ್ದಾರೆ. ಇನ್ನಾದರೂ ನಗರಸಭೆ ಎಚ್ಚೆತ್ತುಕೊಂಡು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಇಲ್ಲವಾದಲ್ಲಿ ನಗರಸಭೆಯನ್ನು ‘ಸೂಪರ್ ಸೀಡ್’ ಮಾಡಿ ಆಡಳಿತಾಧಿಕಾರಿ ಅಧಿಕಾರ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ತಂತ್ರಾಂಶ ಲೋಹ ಶೀಘ್ರ ಬಗೆಹರಿಕೆ : ಸರ್ಕಾರ ಉಪ ನೊಂದಣಿ ಕಛೇರಿಯಲ್ಲಿ ಕಾವೇರಿ 2 ತಂತ್ರಾಂಶ ಜಾರಿಗೊಳಿಸಿದ ಪರಿಣಾಮ ಅನೇಕ ಸಮಯಗಳಿಂದ ಆಸ್ತಿ ಕ್ರಯ, ಭೋಗ್ಯ, ಪರಭಾರೆ, ಖಾತೆ ವರ್ಗಾವಣೆ ಮುಂತಾದವು ನೋಂದಾಣಿ ಆಗುತ್ತಿಲ್ಲ. ಕಾವೇರಿ 2 ತಂತ್ರಾಂಶದಲ್ಲಿ ಏಕರೆ ಮತ್ತು ಗುಂಟೆಗಳ ಮಾನದಂಡವಿದ್ದು, ಕೊಡಗಿನಲ್ಲಿ ಏಕರೆ ಮತ್ತು ಸೆಂಟ್ಸ್ ದಾಖಲೆ ಇದೆ. ಈ ಹಿನ್ನೆಲೆ ಶಾಸಕದ್ವಯರಿಗೆ ಪರಿಸ್ಥಿತಿಯನ್ನು ವಿವರಿಸಲಾಗಿದ್ದು, ಸದ್ಯದಲ್ಲಿಯೇ ಸಮಸ್ಯೆ ಬಗೆಹರಿಯಲಿದೆ ಎಂದು ಅವರು ಹೇಳಿದರು.
ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ ಮಾತನಾಡಿ, ನಗರದ ಹಲವು ಬಡಾವಣೆಗಳು ಬೀದಿ ದೀಪವಿಲ್ಲದೆ ಕತ್ತಲೆ ಆವರಿಸಿದೆ. ಇತ್ತೀಚೆಗೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, ರಾತ್ರಿ ವೇಳೆ ಪ್ರಯಾಣಿಕರು ಹಾಗೂ ಸಾರ್ವಜನಿಕರು ಭಯದಿಂದಲೇ ಓಡಾಡಬೇಕಾದ ಪರಿಸ್ಥಿತಿ ಇದೆ. ಈಗ ಉತ್ಸಾಹಿ,ವಿದ್ಯಾವಂತ ಯುವಕ ಡಾ. ಮಂಥರ್ ಗೌಡ ಶಾಸಕರಾಗಿ ಬಂದಿದ್ದು, ಕೂಡಲೇ ನಗರ ಸಭೆ ಶಾಸಕರ ಸಹಕಾರದಿಂದ ಮಡಿಕೇರಿಯನ್ನು ಮಾದರಿ ನಗರವನ್ನಾಗಿ ರೂಪಿಸಲಿ ಎಂದು ಸಲಹೆ ನೀಡಿದರು.
ಡಿಸಿಸಿ ಸದಸ್ಯ ಚುಮ್ಮಿದೇವಯ್ಯ ಮಾತನಾಡಿ, ಮಳೆಗಾಲ ಸಮೀಪಿಸಿದ್ದು, ನಗರದ ಬಡಾವಣೆಗಳ ಚರಂಡಿಗಳು ಅವ್ಯವಸ್ಥೆಯಿಂದ ಕೂಡಿದೆ. ಇದರಿಂದ ವಾಹನ ಸವಾರರು, ಸಾರ್ವಜನಿಕರು ಪರದಾಡುವ ಪರಿಸ್ಥಿತಿ ಎದುರಾಗಲಿದೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಬಡಾವಣೆಗಳ ಚರಂಡಿಗಳನ್ನು ಶುಚಿಗೊಳಿಸಿ ಚರಂಡಿಗಳನ್ನು ನಿರ್ಮಾಣ ಮಾಡಿ ನೀರು ಸರಾಗವಾಗಿ ಹರಿಯುವಂತೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಡಿಸಿಸಿ ಸದಸ್ಯರಾದ ಕಟ್ರತನ ವೆಂಕಟೇಶ್, ಟಿ.ಹೆಚ್.ಉದಯ ಕುಮಾರ್, ಮಡಿಕೇರಿ ನಗರ ಕಾಂಗ್ರೆಸ್ ಉಪಾಧ್ಯಕ್ಷ ಮಂಡೀರ ಸದಾ ಮುದ್ದಪ್ಪ ಉಪಸ್ಥಿತರಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*