ಮಡಿಕೇರಿ ಜೂ.7 : ಮಡಿಕೇರಿ ಬ್ಲಾಕ್ ಹಾಗೂ ವಲಯಗಳಿಗೆ ಶಾಸಕರ ಕೃತಜ್ಞತಾ ಸಲ್ಲಿಕೆ ಪ್ರವಾಸದ ಪೂರ್ವಭಾವಿ ಸಭೆಯು ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತಮಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ, ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿ ಚುನಾವಣೆಗಳಿಗೆ ಸಜ್ಜಾಗುವಂತೆ ಕರೆ ನೀಡಿದರು. ಇದೇ ಸಂದರ್ಭ ಶಾಸಕರುಗಳ ಕೃತಜ್ಞತಾ ಸಲ್ಲಿಕೆ ಪ್ರವಾಸದ ಬಗ್ಗೆ ಚರ್ಚೆ ನಡೆಯಿತು.
ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಮಂದ್ರಿರ ಮೋಹನ್ ದಾಸ್, ಮಾತನಾಡಿ, ಶಾಸಕರ ಕೃತಜ್ಞತಾ ಸಲ್ಲಿಕೆ ಪ್ರವಾಸದ ಸಂದರ್ಭ ವಿಜಯೋತ್ಸವವನ್ನು ಉತ್ತಮ ಮಟ್ಟದಲ್ಲಿ ಆಚರಿಸುವಂತೆ ಕರೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಐದು ಗ್ಯಾರಂಟಿಗಳ ನಿರ್ಣಯಗಳನ್ನು ಮನೆಮನೆಗೆ ತಲುಪಿಸುವಂತೆ ಕರೆ ನೀಡಿದರು.
ನಗರಸಭಾ ಮಾಜಿ ಅಧ್ಯಕ್ಷ ಕಾವೇರಮ್ಮ ಸೋಮಣ್ಣ ಮಾತನಾಡಿ, ಕೊಡಗಿನಲ್ಲಿ ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿದ್ದ ಸಂದರ್ಭ ಮೂವರು ಸಚಿವರುಗಳಿದ್ದರು. ಈಗ ಜಿಲ್ಲೆಯಲ್ಲಿ ಎರಡು ವಿಧಾನ ಸಭಾ ಕ್ಷೇತ್ರವಿದ್ದು, ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಎರಡೂ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದೆ. ಆದ್ದರಿಂದ ಕೊಡಗಿಗೆ ಒಂದು ಸಚಿವ ಸ್ಥಾನ ನೀಡಬೇಕೆಂದು ಹೇಳಿದರು.
ಕಾಂಗ್ರೆಸ್ ವಲಯಾಧ್ಯಕ್ಷ ಸದಾ ಡೆನ್ನಿಸ್ ಮಾತನಾಡಿ, ಎಲ್ಲ ವಲಯ ಅಧ್ಯಕ್ಷರುಗಳ ಅನಿಸಿಕೆ ಅಭಿಪ್ರಾಯಗಳನ್ನು ಸಂಗ್ರಹಿಸಿ ಕಾರ್ಯಕ್ರಮ ಆಯೋಜಿಸಬೇಕೆಂದು ಹೇಳಿದರು. ಈ ಸಂದರ್ಭ ಬ್ಲಾಕ್ ಅಧ್ಯಕ್ಷರು ಗಿಡಗಳನ್ನು ನೀಡುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸೇವಾದಳದ ಜಿಲ್ಲಾ ಅಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ಪ್ರಧಾನ ಕಾರ್ಯದರ್ಶಿ ಯಶ್ ದೋಲ್ಪಾಡಿ, ಉಪಾಧ್ಯಕ್ಷ ವಿ.ಜಿ.ಮೋಹನ್, ಸಂಘಟನಾ ಕಾರ್ಯದರ್ಶಿ ರವಿ ಗೌಡ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕಲೀಲ್ ಬಾಷಾ, ಡಿಸಿಸಿ ಸದಸ್ಯ ಪುಷ್ಪಾ ಪೂಣಚ್ಚ, ಕೆಪಿಸಿಸಿ ಸಾಮಾಜಿಕ ಜಾಲತಾಣದ ಅಧ್ಯಕ್ಷ ಹರಿಪ್ರಸಾದ್, ಪ್ರಮುಖರಾದ ಜಫ್ರುಲ್ಲಾ, ಭಾರ್ಗವ, ವಿವೇಕಾನಂದ ಹಾಗೂ ಎಲ್ಲಾ ವಲಯ ಅಧ್ಯಕ್ಷರುಗಳು ಬ್ಲಾಕ್ ಸಮಿತಿ ಸದಸ್ಯರುಗಳು ಹಾಜರಿದ್ದರು. ಪ್ರಧಾನ ಕಾರ್ಯದರ್ಶಿ ಎಂ.ರಾವುಫ್ ಸ್ವಾಗತಿಸಿ, ವಂದಿಸಿದರು.