ಮಡಿಕೇರಿ ಜೂ.7 : ಪೊನ್ನಂಪೇಟೆಯ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ 24ನೇ ವಾರ್ಷಿಕೋತ್ಸವವು ಜೂ.9 ಮತ್ತು 10 ರಂದು ನಡೆಯಲಿದೆ.
ಜೂ.9 ರಂದು ಉದ್ಘಾಟನಾ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಸಚಿವ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರಾ ಎಸ್ ಪೊನ್ನಣ್ಣ, ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ.ವಿದ್ಯಾಶಂಕರ್ ಪಾಲ್ಗೊಳ್ಳಲಿದ್ದಾರೆ. ಅಪರಾಹ್ನ ಸಾ೦ಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಜೂ.10 ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಖ್ಯಾತ ಚಲನಚಿತ್ರ ನಟರು ಮತ್ತು ಅನೇಕ ಅತಿಥಿಗಣ್ಯರು ಭಾಗವಹಿಸಲಿದ್ದಾರೆ.
ಎರಡುದಿನ ಕಾಲ ನೃತ್ಯ, ಗೀತೆ, ಸಂಗೀತಕಲರವದೊಂದಿಗೆ ಕಾರ್ಯಕ್ರಮ ರೂಪುಗೊಂಡು ಕಲಾರಸಿಕರ ಕಣ್ಮನಸೆಳೆಯಲಿದೆ.
ವಿವಿಧ ಸೆಲಿಬ್ರಿಟಿಗಳು ಪಾಲ್ಗೊಂಡು ಕಾರ್ಯಕ್ರಮದ ರಂಗನ್ನು ಹೆಚ್ಚಿಸಲಿದ್ದಾರೆ. ಪ್ರಮುಖವಾಗಿ ಕನ್ನಡ ಪ್ರಸಿದ್ಧ ಸಂಗೀತ ಸಂಯೋಜಕ ಚಂದನ್ ಶೆಟ್ಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂಗೀತದ ಮೂಲಕ ರಂಜಿಸಲ್ಲಿದ್ದಾರೆ ಎಂದು ಸಿ.ಐ.ಟಿ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*