ವಿರಾಜಪೇಟೆ ಜೂ.8 : ಪ್ರತಿಯೊಬ್ಬರೂ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಮೂಲಕ ಉತ್ತಮ ಜೀವನವನ್ನು ಪಡೆದುಕೊಳ್ಳಬೇಕು ಎಂದು ಸೌಭಾಗ್ಯ ವಿಕಲಚೇತನರ ಸೇವಾ ಟ್ರಸ್ಟಿನ ಅಧ್ಯಕ್ಷ ಸಾಯಿನಾಥ್ ನಾಯಕ್ ಅಭಿಪ್ರಾಯಪಟ್ಟರು.
ಕೊಡಗು ಆಯುರ್ವೇದ ಕೇಂದ್ರ ಹಾಗೂ ಸೌಭಾಗ್ಯ ವಿಕಲಚೇತನರ ಸೇವಾ ಟ್ರಸ್ಟ್(ರಿ) ವತಿಯಿಂದ ವಿರಾಜಪೇಟೆ ಪುರಭವನದಲ್ಲಿ ನಡೆದ ಹಿರಿಯ ನಾಗರೀಕರು ಹಾಗೂ ವಿಶೇಷ ಚೇತನರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಈ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳುವಂತಾಗಬೇಕು ಎಂದು ಹೇಳಿದರು.
ವಿರಾಜಪೇಟೆ ಗ್ರಾಮಾಂತರ ಠಾಣಾಧಿಕಾರಿ ರವಿಕುಮಾರ್ ಮಾತನಾಡಿ, ಮನುಷ್ಯನ ಜೀವನದಲ್ಲಿ ಆರೋಗ್ಯ ಚೆನ್ನಾಗಿದ್ದರೇ ಮಿಕ್ಕ ಎಲ್ಲವೂ ಚೆನ್ನಾಗಿರುತ್ತವೆ. ಪ್ರತಿ ಎರಡು ತಿಂಗಳಿಗೊಮ್ಮೆ ಹಿರಿಯ ನಾಗರೀಕರು ಹಾಗೂ ವಿಶೇಷ ಚೇತನರಿಗೋಸ್ಕರ ಶಿಬಿರ ನಡೆಯಲಿದ್ದು, ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಪ್ರತಿಯೊಬ್ಬರು ಅವರ ದೇಹದ ಅಂಗಾಂಗಗಳ ಸ್ಥಿತಿಗತಿ ತಿಳಿದುಕೊಂಡು ಅದಕ್ಕೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆದುಕೊಳ್ಳುವುದು ಉತ್ತಮ ಎಂದು ಸಲಹೆ ನೀಡಿದರು.
ಕೊಡಗು ಆಯುರ್ವೇದ ಆರೈಕೆ ಕೇಂದ್ರದ ಮುಖ್ಯಸ್ಥರಾದ ಮ್ಯಾಥ್ಯೂ ಮಾತನಾಡಿ, ಸಮಾಜದಲ್ಲಿ ಹಿರಿಯ ನಾಗರೀಕರು ಹಾಗೂ ವಿಶೇಷ ಚೇತನರಿಗೆ ಹೆಚ್ಚಿನ ಆರೈಕೆ ಮತ್ತು ಕಾಳಜಿಯ ಅಗತ್ಯವಿರುತ್ತದೆ. ಜೊತೆಗೆ ಕೆಲವೊಂದು ಉಚಿತ ಚಿಕಿತ್ಸೆ ಹಾಗೂ ಉಚಿತ ಔಷದಗಳ ಉಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದರು.
ಸೌಭಾಗ್ಯ ವಿಕಲಚೇತನರ ಸೇವಾ ಟ್ರಸ್ಟಿನ ಆಯೇಷಾ, ವೈದ್ಯೆ ಡಾ.ರಕ್ಷಿತಾ ರೈ ಹಾಜರಿದ್ದರು.
ಕಾರ್ಯಕ್ರಮದಲ್ಲಿ ಸುಮಾರು 74 ಮಂದಿ ತಪಾಸಣೆಗೆ ಒಳಗಾದರೂ. ಆರು ಜನರು ಕೃತಕ ಕಾಲುಗಳಿಗಾಗಿ ಬೇಡಿಕೆಯನ್ನು ಸಲ್ಲಿಸಿದರು. ಶಿಬಿರದಲ್ಲಿ ಆರೋಗ್ಯ ತಪಾಸಣೆಯ ಜೊತೆಗೆ ಕೆಲವರಿಗೆ ಚಿಕಿತ್ಸೆ ಹಾಗೂ ಔಷಧವನ್ನು ಉಚಿತವಾಗಿ ನೀಡುವ ವ್ಯವಸ್ಥೆ ಮಾಡಲಾಗಿತ್ತು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*