ಮಡಿಕೇರಿ ಜೂ.8 : ಕೊಡಗು ಜಿಲ್ಲಾ ಕಿವುಡರ ಸಂಘದ ಆಡಳಿತ ಮಂಡಳಿಯ ವಾರ್ಷಿಕ ಮಹಾಸಭೆಯು ಜೂ.26 ರಂದು ನಡೆಯಲಿದೆ.
ವಿರಾಜಪೇಟೆಯ ಪುರಸಭೆಯ ಸಭಾಂಗಣದಲ್ಲಿ ಬೆಳಿಗ್ಗೆ 10.30ಕ್ಕೆ ಸಭೆ ನಡೆಯಲಿದ್ದು, ಕರ್ನಾಟಕ ರಾಜ್ಯ ಕಿವುಡರ ಸಂಘದ ಅಧ್ಯಕ್ಷ ಗಣೇಶ್ ರಾವ್ ಮಾತನಾಡಲಿದ್ದಾರೆ. ಸರ್ವ ಸದಸ್ಯರು ಸಭೆಗೆ ಹಾಜರಾಗುವಂತೆ ಸಮಿತಿ ಉಪಾಧ್ಯಕ್ಷ ಶಂಕರನಾರಾಯಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ 9632759874 ಸಂಪರ್ಕಿಸಬಹುದಾಗಿದೆ.









