ಮಡಿಕೇರಿ ಜೂ.7 : ಕೊಡಗು ಪ್ರೆಸ್ ಕ್ಲಬ್ ಬೆಳ್ಳಿಹಬ್ಬ ಪ್ರಯುಕ್ತ ಕೊಡವಾಮೆ ಸಂಘಟನೆ ಆಶ್ರಯದಲ್ಲಿ ಜೂ.10 ರಂದು ಮಡಿಕೇರಿಯಲ್ಲಿರುವ ಪತ್ರಿಕಾ ಭವನದಲ್ಲಿ ಕೊಡವ ಸಂಸ್ಕೃತಿ ವಿಚಾರಗೋಷ್ಠಿ ಆಯೋಜಿಸಲಾಗಿದೆ.
ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ, ಕೊಡವಾಮೆ ಸಂಘಟನೆ, ಬುಡಕಟ್ಟು ಸಂಸ್ಕೃತಿ ಅಧ್ಯಯನ ಕೇಂದ್ರದ ಸಂಯುಕ್ತಾಶಯದಲ್ಲಿ ವಿಚಾರಗೋಷ್ಠಿ ಆಯೋಜಿಸಲಾಗಿದೆ ಎಂದು ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಕೆ. ರೆಜಿತ್ಕುಮಾರ್ ಗುಹ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ.ಉಳ್ಳಿಯಡ ಎಂ. ಪೂವಯ್ಯ ಅಧ್ಯಕ್ಷತೆಯಲ್ಲಿ ಅಂದು ಬೆಳಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ.
ಮರ್ಂದ್ ಮರೆಯಾನ ಕೊಡವ ನಡ್ಪ್ ತೊಡ್ಪ್ ವಿಚಾರದ ಕುರಿತು ಹಿರಿಯ ಸಾಹಿತಿ ಬಾಚರಣಿಯಂಡ ರಾಣಿ ಅಪ್ಪಣ್ಣ ವಿಷಯ ಮಂಡಿಸಲಿದ್ದಾರೆ. ಮಾಳೇಟಿರ ಸೀತಮ್ಮ ವಿವೇಕ್ ಬರೆದಿರುವ ಭಾವ ಕುಸುಮ ಕವನ ಸಂಕಲನ ಲೋಕಾರ್ಪಣೆ ಮಾಡಲಾಗುತ್ತದೆ. ಮಧ್ಯಾಹ್ನ ಮೇಲೆ ನಡೆಯುವ ವಿಚಾರಗೋಷ್ಠಿಯಲ್ಲಿ ಲೋಕ ಮೆಚ್ಚ್ನ ಕೊಡವ ಸಂಸ್ಕೃತಿ ವಿಷಯದ ಕುರಿತು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಬಾಚರಣಿಯಂಡ ಪಿ. ಅಪ್ಪಣ್ಣ ವಿಚಾರ ಮಂಡಿಸಲಿದ್ದಾರೆ. 1 ಗಂಟೆ ಅವಧಿಗೆ ವಿಚಾರ ಮಂಡಿಸಲಿದ್ದು, ತದನಂತರ ಆ ವಿಷಯದ ಕುರಿತು ಅರ್ಧ ಗಂಟೆ ಚರ್ಚೆ ನಡೆಯಲಿದೆ.
Breaking News
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*