ವಿರಾಜಪೇಟೆ ಜೂ.7 : ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ ಎಂದು ವಿರಾಜಪೇಟೆಯ ಸಹಾಯಕ ಕೃಷಿ ಉಪನಿರ್ದೇಶಕ ಪಿ.ಶಿವಮೂರ್ತಿ ಅಭಿಪ್ರಾಯಪಟ್ಟರು.
ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ಪರಿಸರ ದಿನದ ಪ್ರಯುಕ್ತ ನಡೆದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಗಿಡ ನೆಡುವುದರ ಮೂಲಕ ಜಾಗೃತಿ ಮೂಡಿಸಿದರು.
ನಂತರ ಮಾತನಾಡಿದ ಅವರು, ವಿದ್ಯಾರ್ಥಿಗಳು ಈಗಿನಿಂದಲೇ ಪರಿಸರ ಸಂರಕ್ಷಣಾ ಜಾಗೃತಿ ಹೊಂದಿರಬೇಕೆಂದು ಕರೆ ನೀಡಿದರು.
ಸಹಾಯಕ ಧರ್ಮಗುರುಗಳಾದ ಫಾ. ಯೇಸು ಪ್ರಸಾದ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪರಿಸರ ದಿನಾಚರಣೆ ಕುರಿತು ಮಾತನಾಡಿದರು.
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಪರಿಸರವಾದಿಗಳಾದ ಅಭಿಷೇಕ್ ಉತ್ತಪ್ಪ ಕೊಡಗು ಜಿಲ್ಲೆಯಲ್ಲಿ ಹವಾಮಾನ ಬದಲಾವಣೆ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು.
ಅರಣ್ಯವನ್ನು ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಪರಿಸರ ಮಾಲಿನ್ಯವನ್ನು ತಡೆಗಟ್ಟಬೇಕು ಎಂದರಲ್ಲದೆ ನಾಗರೀಕರಣ, ಕೈಗಾರೀಕರಣವು ಪರಿಸರದ ಮೇಲೆ ಉಂಟು ಮಾಡುವ ದುಷ್ಪರಿಣಾಮವನ್ನು ತಡೆಗಟ್ಟಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಬದಲಾಗುತ್ತಿರುವ ಹವಾಮಾನ ಸನ್ನಿವೇಶದಲ್ಲಿ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆಯಾಗಿದೆ. ವಿದ್ಯಾರ್ಥಿಗಳು ಪರಿಸರ ಜಾಗೃತಿ ಮೂಡಿಸಿಕೊಳ್ಳಬೇಕೆಂದು ಹೇಳಿದರು.
ಕಾಲೇಜಿನ ಎನ್.ಎಸ್‍ಎಸ್ ಅಧಿಕಾರಿ ಅರ್ಜುನ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಎನ್‍ಎಸ್‍ಎಸ್ ವಿದ್ಯಾರ್ಥಿಗಳು ಹಾಗೂ ನೇಚರ್ ಕ್ಲಬ್‍ನ ವಿದ್ಯಾರ್ಥಿಗಳು ಹಾಜರಿದ್ದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*