ಮಡಿಕೇರಿ ಜೂ.8 : ಕಳೆದ ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿರುವ ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ.ಹಂಸ ಅವರಿಗೆ ವಿಧಾನ ಪರಿಷತ್ ಸ್ಥಾನ ಅಥವಾ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಬೇಕೆಂದು ಬ್ಲಾಕ್ ಪ್ರಧಾನ ಕಾರ್ಯದರ್ಶಿ ಎಂ.ಎನ್.ರೌವೂಫ್ ಮನವಿ ಮಾಡಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದು, ಮಡಿಕೇರಿ ಕ್ಷೇತ್ರದ ಅಭ್ಯರ್ಥಿ ಡಾ.ಮಂತರ್ ಗೌಡ ಅವರ ಗೆಲುವಿನಲ್ಲಿ ಬ್ಲಾಕ್ ಅಧ್ಯಕ್ಷ ಹೆಚ್.ಎ.ಹಂಸ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಯಾವುದೇ ರೀತಿಯಲ್ಲಿ ಪ್ರಚಾರ ಪಡೆಯದೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಹೆಚ್ಚು ಮತದಾರರನ್ನು ಕಾಂಗ್ರೆಸ್ ಕಡೆಗೆ ಸೆಳೆಯುವಲ್ಲಿ ಹಂಸ ಯಶಸ್ವಿಯಾಗಿದ್ದಾರೆ. ಇವರ ಪಕ್ಷದ ಮೇಲಿನ ನಿಷ್ಠೆಯನ್ನು ಗಮನಿಸಿ ವರಿಷ್ಠರು ವಿಧಾನ ಪರಿಷತ್ ಸ್ಥಾನ ಅಥವಾ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಬೇಕೆಂದು ಮನವಿ ಮಾಡಿದ್ದಾರೆ.
ಯಾವುದೇ ಜವಾಬ್ದಾರಿ ನೀಡಿದರೂ ಉತ್ತಮ ರೀತಿಯಲ್ಲಿ ನಿಭಾಯಿಸುವ ಸಾಮಥ್ರ್ಯ ಹಂಸ ಅವರಿಗಿದ್ದು, ಕಾರ್ಯಕರ್ತರ ಬೇಡಿಕೆಗೆ ಸರ್ಕಾರ ಸ್ಪಂದಿಸಲಿದೆ ಎಂದು ರೌವೂಫ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.










