ಮಡಿಕೇರಿ ಜೂ.8 : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜು.8 ರಂದು ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ `ರಾಷ್ಟ್ರೀಯ ಲೋಕ್ ಅದಾಲತ್’ ನಡೆಯಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಡಿ.ಟಿ.ಪುಟ್ಟರಂಗಸ್ವಾಮಿ ತಿಳಿಸಿದ್ದಾರೆ.
ನಗರದ ನೂತನ ನ್ಯಾಯಾಲಯ ಸಭಾಂಗಣದಲ್ಲಿ ವಕೀಲರು ಹಾಗೂ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಮಾತನಾಡಿದರು.
ನ್ಯಾಯಾಲಯಗಳಲ್ಲಿ ಹಲವು ಪ್ರಕರಣಗಳಿದ್ದು, ಇವುಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ನಿಟ್ಟಿನಲ್ಲಿ ಲೋಕ್ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ. ವಕೀಲರ ಸಹಕಾರದಿಂದ ಲೋಕ್ ಅದಾಲತ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಿದೆ ಎಂದು ಡಿ.ಟಿ.ಪುಟ್ಟರಂಗಸ್ವಾಮಿ ವಿವರಿಸಿದರು.
ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ ಎಂದರು.
ಲೋಕ ಅದಾಲತ್ನಲ್ಲಿ ರಾಜಿಯಾಗಬಲ್ಲ ಅಪರಾಧಿತ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಸಾರ್ವಜನಿಕ ಉಪಯುಕ್ತತೆ ಸೇವೆಗಳ ಸಂಬಂಧಿಸಿದ ಪ್ರಕರಣಗಳು, ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು ಹಾಗೂ ವೈವಾಹಿಕ ಕುಟುಂಬ ನ್ಯಾಯಾಲಯ ಪ್ರಕರಣಗಳನ್ನು(ವಿಚ್ಛೇದನೆಯನ್ನು ಹೊರತುಪಡಿಸಿ) ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಕೆ.ಬಿ.ಪ್ರಸಾದ್ ಲೋಕ್ ಅದಾಲತ್ ಮಹತ್ವದ ಬಗ್ಗೆ ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಮಡಿಕೇರಿ ವಕೀಲರ ಸಂಘದ ಅಧ್ಯಕ್ಷ ಕೆ.ಡಿ.ದಯಾನಂದ, ಪೌರಾಯುಕ್ತ ವಿಜಯ್, ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್, ಇತರರು ಹಾಜರಿದ್ದರು.
ಮತ್ತಷ್ಟು ಮಾಹಿತಿ: ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರು ಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ.
ಪ್ರತಿದಿನ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಹಾಗೂ ಖಾಯಂ ಜನತಾ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್ಗಳು ಭೌತಿಕ ಹಾಗೂ ವೀಡಿಯೋ ಕಾನ್ಫೆರೆನ್ಸ್ ಮೂಲಕ ಗೌರವಾನ್ವಿತ ಉಚ್ಛ ನ್ಯಾಯಾಲಯ ಎಸ್ಒಪಿ ನಿಯಮಗಳಂತೆ ನಡೆಯುತ್ತದೆ. ಹೆಚ್ಚಿನ ಮಾಹಿತಿಗೆ ಟೋಲ್ ಫ್ರೀ ಸಂಖ್ಯೆ 180042590900 ನ್ನು ಸಂಪರ್ಕಿಸಬಹುದು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*