ಮಡಿಕೇರಿ ಜೂ.8 : ಪ್ರಸಕ್ತ (2023-24) ಸಾಲಿಗೆ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಗೊಳಪಡುವ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆಸಕ್ತ ಮತ್ತು ಅರ್ಹ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಂದ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.
ಶೇ.75 ಸ್ಥಾನಗಳು ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ ಮತ್ತು ಉಳಿದ ಶೇ.25 ಸ್ಥಾನಗಳು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಲಭ್ಯವಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ 5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿನಿಲಯದ ವಾರದ 7 ದಿನಗಳಲ್ಲಿ ಪೌಷ್ಠಿಕಯುಕ್ತ ಉಪಹಾರ ಹಾಗೂ ಊಟದ ವ್ಯವಸ್ಥೆ, ಉಚಿತ ವಸತಿ, ಲೇಖನ ಸಾಮಾಗ್ರಿಗಳು, ಸಮವಸ್ತ್ರ, ಶೂ ಮತ್ತು ಸಾಕ್ಸ್ ವಿತರಣೆ, ವೈದ್ಯಕೀಯ ತಪಾಸಣೆ, ಅಂಶಕಾಲಿಕ ಬೋಧಕರಿಂದ ವಿಶೇಷ ಬೋಧನಾ ವ್ಯವಸ್ಥೆ, ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ, ಶುಚಿ ಸಂಭ್ರಮ ಕಿಟ್, ಬಾಲಕಿಯರಿಗೆ ಒನಕೆ ಓಬವ್ವ ಆತ್ಮ ರಕ್ಷಣಾ ಕೌಶಲ್ಯ ತರಬೇತಿಯನ್ನು ನೀಡಲಾಗುವುದು.
ಹೊಸದಾಗಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ https:/shp.karnataka.gov.in ಮೂಲಕ ಆನ್‍ಲೈನ್ ಮುಖಾಂತರ ಅರ್ಜಿ ಸಲ್ಲಿಸಿ ಅರ್ಜಿಯೊಂದಿಗೆ ವಿದ್ಯಾರ್ಥಿಯ ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಹಿಂದಿನ ವರ್ಷದ ಅಂಕಪಟ್ಟಿ (SಂಖಿS Iಆ ಯೊಂದಿಗೆ) ಭಾವಚಿತ್ರ ಹಾಗೂ ಪೋಷಕರ ಆಧಾರ್ ಕಾರ್ಡ್ ಪ್ರತಿಯನ್ನು ಸಂಬಂಧಿಸಿದ ನಿಯಮಗಳ ವಾರ್ಡನ್‍ರವರಿಗೆ ಸಲ್ಲಿಸಬೇಕು.
ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ, ಮಡಿಕೇರಿ ದೂ.ಸಂ. 6366036880, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ, ಮಡಿಕೇರಿ ದೂ.ಸಂ. 6363128975, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ, ಚೇರಂಬಾಣೆ ದೂ.ಸಂ. 8310074686 ಹಾಗೂ ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ಇಲ್ಲಿನ ಕಚೇರಿ ದೂ.ಸಂ. 948084355 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ತಿಳಿಸಿದ್ದಾರೆ.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*