ಮಡಿಕೇರಿ ಜೂ.8 : ಪ್ರಸಕ್ತ (2023-24) ಸಾಲಿನಲ್ಲಿ ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ಸಮನ್ವಯ ಶಿಕ್ಷಣ ಮಧ್ಯವರ್ತನೆಯ ಕಾರ್ಯ ಚಟುವಟಿಕೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕ್ಷೇತ್ರ ಸಂಪನ್ಮೂಲ ಕೇಂದ್ರಗಳಲ್ಲಿ ಖಾಲಿಯಿರುವ 6 ಪ್ರೌಢ ಶಾಲಾ ಮತ್ತು 1 ಪ್ರಾಥಮಿಕ ವಿಭಾಗದ ವಿಶೇಷ ಸಂಪನ್ಮೂಲ ಶಿಕ್ಷಕರ ಹುದ್ದೆಗೆ ನೇರಗುತ್ತಿಗೆ ಮೂಲಕ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಲು ವಿಶೇಷ ಡಿಎಡ್/ ಬಿಎಡ್ ವಿದ್ಯಾರ್ಹತೆ ಹೊಂದಿ ಆರ್‍ಸಿಐನಲ್ಲಿ ನೋಂದಣಿ ಮಾಡಿಕೊಂಡಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಜೂ.15 ರಂದು ಸಂಜೆ 4 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರು ಹಾಗೂ ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆ, ಮಡಿಕೇರಿ, ಕೊಡಗು ಜಿಲ್ಲೆ ಇವರನ್ನು ಹಾಗೂ ದೂ.ಸಂ.9448999400 ನ್ನು ಸಂಪರ್ಕಿಸಬಹುದು ಎಂದು ಸಮಗ್ರ ಶಿಕ್ಷಣ ಅಭಿಯಾನದ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಹಾಗೂ ಉಪ ನಿರ್ದೇಶಕರು ತಿಳಿಸಿದ್ದಾರೆ.












