ಮಡಿಕೇರಿ ಜೂ.8 : ಪಂಚಾಯತ್ ರಾಜ್ ಹಾಗೂ ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ತರಬೇತಿ ಸಂಸ್ಥೆ ವತಿಯಿಂದ ನ್ಯಾಯಾಂಗ ಇಲಾಖೆ ಸಹಯೋಗದಲ್ಲಿ ಕಾನೂನು ವಿಷಯಗಳಿಗೆ ಸಂಬಂಧಿಸಿದಂತೆ ಅರಿವು ಮೂಡಿಸುವ ಕಾರ್ಯಕ್ರಮವು ಜೂ.9 ರಂದು ಬೆಳಗ್ಗೆ 10 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದ ಬಳಿ ಇರುವ ತಾ.ಪಂ. ಸಾಮಥ್ರ್ಯ ಸೌಧ ಸಭಾಂಗಣದಲ್ಲಿ ನಡೆಯಲಿದೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ತಾ.ಪಂ.ಇಒ ಶೇಖರ್, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ತರಬೇತಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಎಚ್.ಕೆ.ಸುರೇಶ್, ಸಂಪನ್ಮೂಲ ವ್ಯಕ್ತಿ ಎಂ.ಎನ್.ಉಮೇಶ್, ವಕೀಲರಾದ ಮೀನಾ ಕುಮಾರಿ, ಪುಂಡರೀಕ ಇತರರು ಪಾಲ್ಗೊಳ್ಳಲಿದ್ದಾರೆ.








