ಮಡಿಕೇರಿ ಜೂ.9 : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ರಿಗೆ ಕೊಡವ ಸಾಹಿತ್ಯ ಕ್ಷೇತ್ರದ ಪ್ರತಿಷ್ಠಿತ ಸ್ವಯಂ ಸೇವಾ ಸಂಸ್ಥೆಯಾದ ‘ಕೊಡವ ತಕ್ಕ್ ಎಳ್ತ್’ಕಾರಡ ಕೂಟ’ದ ಸದಸ್ಯರು ಅಭಿನಂದಿಸಿದರು.
ಕೊಡವ ಜನಾಂಗದ ಕೊರವುಕಾರರಿಗೆ ನೀಡುವ ವಿಶೇಷ ಗೌರವದ ಪ್ರತೀಕವಾಗಿರುವ ರೇಷ್ಮೆ ಪಟ್ಟ್ ವಸ್ತ್ರವನ್ನು ಪೊನ್ನಣ್ಣ ಅವರ ಹೆಗಲಿಗಿರಿಸಿ, ಕೊಡವ ಜನಾಂಗದ ಗುರು ಕಾರೋಣ, ಕುಲಮಾತೆ ಕಾವೇರಿ, ಮಾಗುರು ಇಗ್ಗುತಪ್ಪ ದೇವರ ಆಶೀರ್ವಚನ ನೀಡುವ ವಿಶೇಷ ಫಲಕವನ್ನು ನೀಡಿ ಗೌರವಿಸಲಾಯಿತು.
ಈ ಸಂದರ್ಭ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಗೆ ಅಧ್ಯಕ್ಷ ಹಾಗೂ ಸದಸ್ಯರನ್ನು ಆಯ್ಕೆ ಮಾಡುವಾಗ ಕೊಡವ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ, ಜಾನಪದದ ವಿಶೇಷ ಅರಿವು ಇರುವ ಹಾಗೂ ಆ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಮರ್ಥ ರನ್ನು ಆಯ್ಕೆ ಮಾಡುವಂತೆ ಮನವಿ ಮಾಡಿದರು.
ಈ ಸಂದರ್ಭ ಕೊಡವ ತಕ್ಕ್ ಎಳ್ತ್’ಕಾರಡ ಕೂಟದ ಅಧ್ಯಕ್ಷ ಚೆಟ್ಟಂಗಡ ರವಿ ಸುಬ್ಬಯ್ಯ, ಉಪಾಧ್ಯಕ್ಷ ಚೆಂಬಾಂಡ ಶಿವಿ ಭೀಮಯ್ಯ, ಕಾರ್ಯದರ್ಶಿ ಅಮ್ಮಣಿಚಂಡ ಪ್ರವೀಣ್ ಚಂಗಪ್ಪ, ಖಜಾಂಚಿ ಬೋಡಂಗಡ ಜಗದೀಶ್ ತಿಮ್ಮಯ್ಯ, ನಿರ್ದೇಶಕ ಕಾಳಿಮಾಡ ಮೋಟಯ್ಯ ಸೇರಿದಂತೆ ಮತ್ತಿತರರು ಹಾಜರಿದ್ದರು.









