ಮಡಿಕೇರಿ ಜೂ.9 : ಅಲ್ಲಾರಂಡ ರಂಗಚಾವಡಿ ಹಾಗೂ ಸಿರಿಗನ್ನಡ ವೇದಿಕೆ ಸಹಯೋಗದಲ್ಲಿ ಬಹುಭಾಷಾ ಬೈಗುಳ ಸಾಹಿತ್ಯೋತ್ಸವ ನಡೆಯಲಿದ್ದು, ಲೇಖಕರಿಂದ ಬರಹಗಳನ್ನು ಆಹ್ವಾನಿಸಲಾಗಿದೆ.
ನವೆಂಬರ್ ತಿಂಗಳಿನಲ್ಲಿ ರಾಜ್ಯೋತ್ಸವದ ಸಂದರ್ಭ ಕಾರ್ಯಕ್ರಮ ಆಯೋಜನೆ ಮಾಡಲು ನಿರ್ಧರಿಸಿದ್ದು, ವಿಭಿನ್ನ ರೀತಿಯ ಬೈಗುಳಗಳನ್ನು ಪುಸ್ತಕ ರೂಪದಲ್ಲಿ ಹೊರತರುವ ಉದ್ದೇಶ ಹೊಂದಲಾಗಿದೆ.
ಆಸಕ್ತರು ಆ.31ರ ಒಳಗೆ kudekalsanthu@gmail.com ವಿಳಾಸಕ್ಕೆ ಬರಹಗಳನ್ನು ಕಳುಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.9448312310, 9972538584 ಸಂಪರ್ಕಿಸಬಹುದಾಗಿದೆ ಎಂದು ರಂಗಚಾವಡಿ ಹಾಗೂ ಸಿರಿಗನ್ನಡ ವೇದಿಕೆ ಅಧ್ಯಕ್ಷ ಅಲ್ಲರಂಡ ವಿಠಲ ತಿಳಿಸಿದ್ದಾರೆ.








