ಮಡಿಕೇರಿ ಜೂ.9 : ಮಡಿಕೇರಿ ಕ್ಷೇತ್ರದ ನೂತನ ಶಾಸಕ ಡಾ.ಮಂತರ್ ಗೌಡ ಅವರನ್ನುಕೊಡಗು ಜಿಲ್ಲಾ ಬಂಟರ ಸಂಘದ ವತಿಯಿಂದ ಸನ್ಮಾನಿಸಿ ಶುಭ ಹಾರೈಸಲಾಯಿತು.
ಜಿಲ್ಲಾ ಪಂಚಾಯಿತಿ ಕಟ್ಟಡದಲ್ಲಿನ ಶಾಸಕರ ಕಚೇರಿಯಲ್ಲಿ ಭೇಟಿಯಾದ ಸಂಘದ ಪದಾಧಿಕಾರಿಗಳು ಶಾಸಕರನ್ನು ಅಭಿನಂದಿಸಿದರು.
ಈ ಸಂದರ್ಭ ಜಿಲ್ಲಾಧ್ಯಕ್ಷ ಬಿ.ಡಿ.ಜಗದೀಶ್‍ರೈ, ಉಪಾಧ್ಯಕ್ಷ ಬಿ.ಕೆ.ರವೀಂದ್ರರೈ, ಸಹಕಾರ್ಯದರ್ಶಿ ಮನೋಜ್ ಶೆಟ್ಟಿ, ನಿರ್ದೇಶಕರಾದ ಪ್ರಭುರೈ, ಶರತ್‍ಕುಮಾರ್ ಶೆಟ್ಟಿ, ಸತೀಶ್ ರೈ ಹಾಜರಿದ್ದರು.









