ಮಡಿಕೇರಿ ಜೂ.9 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪೊಲೀಸ್ ಇಲಾಖೆ, ವಕೀಲರ ಸಂಘ, ಚೈಲ್ಡ್ ಲೈನ್-1098 ಇವರ ಸಂಯುಕ್ತ ಆಶ್ರಯದಲ್ಲಿ ಜೂ.12 ರಂದು ಬೆಳಗ್ಗೆ 10.15 ಗಂಟೆಗೆ ನಗರದ ಸರ್ಕಾರಿ ಪ್ರೌಢ ಶಾಲಾ ಸಭಾಂಗಣದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ ಕಾರ್ಯಕ್ರಮ ನಡೆಯಲಿದೆ.
ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಡಿ.ಟಿ.ಪುಟ್ಟರಂಗಸ್ವಾಮಿ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್, ಜಿ.ಪಂ.ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಸಿ.ರಂಗಧಾಮಯ್ಯ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಮಡಿಕೇರಿ ವಕೀಲರ ಸಂಘದ ಅಧ್ಯಕ್ಷರಾದ ಕೆ.ಡಿ.ದಯಾನಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ನಟರಾಜ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಎ.ಎಂ.ಸೂರಜ್, ಕೊಡಗು ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಕುಶಾಲನಗರ ಚೈಲ್ಡ್ ಲೈನ್-1098 ನಿರ್ದೇಶಕರಾದ ವಿ.ಎಸ್.ರಾಯ್ ಡೇವಿಡ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕರಾದ ಆರ್.ಶೀರಾಝ್ ಅಹ್ಮದ್, ಕಾರ್ಮಿಕ ಅಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸದಸ್ಯ ಕಾರ್ಯದರ್ಶಿ ಎಸ್.ಎಲ್.ಹರ್ಷವರ್ಧನ್, ಇತರರು ಪಾಲ್ಗೊಳ್ಳಲಿದ್ದಾರೆ.
ಹಿರಿಯ ವಕೀಲ ಕೆ.ಆರ್.ವಿದ್ಯಾಧರ ಗೌಡ ಅವರು ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಕಾಯ್ದೆ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.









